ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರ್ಭಯಾ ದೋಷಿ ಪ್ರತ್ಯೇಕ ಗಲ್ಲುಶಿಕ್ಷೆಗೆ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ

|
Google Oneindia Kannada News

ನವದೆಹಲಿ, ಫೆಬ್ರವರಿ.25: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳನ್ನು ಪ್ರತ್ಯೇಕವಾಗಿ ಗಲ್ಲುಶಿಕ್ಷೆಗೆ ಗುರಿಪಡಿಸಲು ನಿರ್ದೇಶನ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಮಂಗಳವಾರ ವಿಚಾರಣೆಗೆ ಬರಲಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಬಾನುಮತಿ ನೇತೃತ್ವದ ನ್ಯಾ.ಅಶೋಕ್ ಭೂಷಣ್, ನ್ಯಾ. ನವಿನ್ ಸಿನ್ಹಾರನ್ನೊಳಗೊಂಡ ತ್ರಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದ ಬೆನ್ನಲ್ಲೇ ಇದೀಗ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಉನ್ನತ ಚಿಕಿತ್ಸೆ: ನಿರ್ಭಯಾ ಆರೋಪಿ ವಿನಯ್ ಶರ್ಮಾ ಅರ್ಜಿ ವಜಾಉನ್ನತ ಚಿಕಿತ್ಸೆ: ನಿರ್ಭಯಾ ಆರೋಪಿ ವಿನಯ್ ಶರ್ಮಾ ಅರ್ಜಿ ವಜಾ

ಕಳೆದ ಫೆಬ್ರವರಿ.05ರಂದು ದೋಷಿಗಳನ್ನು ಪ್ರತ್ಯೇಕವಾಗಿ ಗಲ್ಲುಶಿಕ್ಷೆಗೆ ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅಂದು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಒಂದೇ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ದೋಷಿಗಳನ್ನು ಜೊತೆಯಲ್ಲಿಯೇ ಗಲ್ಲುಶಿಕ್ಷೆಗೆ ಗುರಿಪಡಿಸಬೇಕು. ಅದರ ಬದಲು ಪ್ರತ್ಯೇಕವಾಗಿ ಗಲ್ಲುಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.

Delhi Nirbhaya Rape Case: Supreme Court Hear Centres Plea For Separate Executions

ಉನ್ನತ ವೈದ್ಯಕೀಯ ತಪಾಸಣೆ ಅರ್ಜಿ ವಜಾ:

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳ ಗಲ್ಲುಶಿಕ್ಷೆಗೆ ದೆಹಲಿ ಹೈಕೋರ್ಟ್ ಈಗಾಗಲೇ ಡೆತ್ ವಾರಂಟ್ ಹೊರಡಿಸಿದೆ. ಮಾರ್ಚ್.03ರಂದು ಗಲ್ಲುಶಿಕ್ಷೆ ವಿಧಿಸುವಂತೆ ಸೂಚನೆ ನೀಡಿದೆ. ಇದರ ನಡುವೆ ತಿಹಾರ್ ಜೈಲಿನಲ್ಲಿ ದೋಷಿ ವಿನಯ್ ಶರ್ಮಾ ತಲೆ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದನು. ಈತನಿಗೆ ಉನ್ನತ ಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ದೋಷಿ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಈ ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿತ್ತು.

English summary
Delhi Nirbhaya Rape Case: Supreme Court Hear Centre's Plea For Convicts Separate Executions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X