"ದೋಷಿಗಳಿಗೆ ಗಲ್ಲು ವಿಧಿಸುವವರೆಗೂ ಹೋರಾಟ ಬಿಡಲ್ಲ"

ನವದೆಹಲಿ, ಜನವರಿ.31: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ದೋಷಿಗಳಿಗೆ ಗಲ್ಲುಶಿಕ್ಷೆ ಜಾರಿಯಾಗುವವರೆಗೂ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ನಿರ್ಭಯಾ ತಾಯಿ ಆಶಾದೇವಿ ಹೇಳಿದ್ದಾರೆ.

ನಾಲ್ವರು ದೋಷಿಗಳ ಗಲ್ಲುಶಿಕ್ಷೆಗೆ ದೆಹಲಿಯ ಪಟಿಯಾಲಾ ಹೌಸ್ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಬೆನ್ನಲ್ಲೇ ಆಶಾದೇವಿ ಪ್ರತಿಕ್ರಿಯೆ ನೀಡಿದರು. ನ್ಯಾಯಾಂಗದ ಮೇಲಿನ ನಂಬಿಕೆಯೇ ಹೊರಟು ಹೋಗಿದೆ. ಆದರೂ, ಅಪರಾಧಿಗಳಿಗೆ ಮರಣದಂಡನೆ ಜಾರಿಯಾಗುವವರೆಗೂ ಹೋರಾಟ ನಡೆಸುತ್ತೇವೆ ಎಂದರು.

ನಿರ್ಭಯಾ ಅತ್ಯಾಚಾರಿಗಳಿಗೆ ಬದುಕುವ ಅರ್ಹತೆಯೇ ಇಲ್ಲ. ವ್ಯವಸ್ಥೆಯನ್ನು ಕಂಡಾಗ ನಮಗೆ ಬೇಸರಾಗುತ್ತಿದೆ ಆದರೂ, ನಮ್ಮ ಹೋರಾಟ ಇಲ್ಲಿಗೆ ಕೊನೆಯಾಗುವುದಿಲಲ್ಲ ಎಂದು ನಿರ್ಭಯಾ ತಾಯಿ ಆಶಾದೇವಿ ತಿಳಿಸಿದ್ದಾರೆ.

 Delhi Nirbhaya Rape case: We Continue Our Fight Against Covicted

ದೋಷಿಗಳ ಗಲ್ಲುಶಿಕ್ಷೆಗೆ ತಡೆ ವಿಧಿಸಿದ ಹೈಕೋರ್ಟ್:

ಶುಕ್ರವಾರ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ದೋಷಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲಾ ಹೌಸ್ ಹೈಕೋರ್ಟ್ ಫೆಬ್ರವರಿ.01ರಂದು ಜಾರಿಯಾಗಬೇಕಿದ್ದ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಮುಂದಿನ ಆದೇಶ ನೀಡುವವರೆಗೂ ನಾಲ್ವರು ದೋಷಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+