• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿಯಲ್ಲಿ ಮಧ್ಯರಾತ್ರಿ 1 ಗಂಟೆಗೆ "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ!

|

ನವದೆಹಲಿ, ಜನವರಿ.24: ರಾಷ್ಟ್ರ ರಾಜಧಾನಿಯಲ್ಲಿ ನಿಂತು "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ ಕೂಗಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿ ದೆಹಲಿ ಖಾನ್ ಮಾರುಕಟ್ಟೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿರುವ ಬಗ್ಗೆ ದೂರು ದಾಖಲಿಸಲಾಗಿತ್ತು.

ಪಾಕಿಸ್ತಾನ್ ಪರ ಘೋಷಣೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಿದ ಪೊಲೀಸರು ಭಾನುವಾರ ಬೆಳಗಿನ ಜಾವ ನಗರದ ಖಾನ್ ಮಾರುಕಟ್ಟೆ ಸಮೀಪದಲ್ಲಿ ನಿಂತಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.

ಉಜಿರೆ; ಮತ ಎಣಿಕೆ ಕೇಂದ್ರದ ಮುಂದೆ ಪಾಕಿಸ್ತಾನ ಪರ ಘೋಷಣೆ

ನವದೆಹಲಿ ಖಾನ್ ಮಾರುಕಟ್ಟೆ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಯಾರೋ ಅಪರಿಚಿತರು ಪಾಕಿಸ್ತಾನರ ಪರವಾಗಿ ಘೋಷಣೆ ಕೂಗುತ್ತಾ ಓಡಾಡುತ್ತಿದ್ದಾರೆ ಎಂದು ಮಧ್ಯರಾತ್ರಿ 1 ಗಂಟೆ ವೇಳೆಗೆ ಪೊಲೀಸ್ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆಗೆ ದೂರು ಬಂದಿತ್ತು.

ಮಧ್ಯರಾತ್ರಿ 3 ಗಂಟೆಗೆ ಆರೋಪಿಗಳು ಅರೆಸ್ಟ್:

ದೆಹಲಿಯ ತುಘಲಕ್ ರಸ್ತೆಯಲ್ಲಿ ಖಾನ್ ಮಾರುಕಟ್ಟೆ ಮೆಟ್ರೋ ನಿಲ್ದಾಣದ ಸುತ್ತಮುತ್ತಲಿನಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಆರೋಪಿಗಳ ಮೇಲೆ ಕಣ್ಣಿಟ್ಟ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಈ ವೇಳೆ ಬೈಕಿನಲ್ಲಿದ್ದ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರ ಜೊತೆಗೆ ಬಂಧಿತ ಆರೋಪಿಗಳ ಸಂಬಂಧಿಕರನ್ನು ಕೂಡಾ ವಿಚಾರಣೆಗೆ ಒಳಪಡಿಸಲಾಗುವುದು ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

English summary
Delhi Police Arrested 5 People For Raise The Pakistan Zindabad Slogan At Delhi's Khan Market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X