Video: ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಬಟ್ಟೆ ಹರಿದು ಖಾಕಿ ಕ್ರೂರ ವರ್ತನೆ!

ನವದೆಹಲಿ, ಜೂನ್ 15: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಮತ್ತು ಸಂಸದರ ಪ್ರತಿಭಟನೆ ಮುಂದುವರಿದಿದೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ತಮಿಳುನಾಡಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣೆ ಜೊತೆಗೆ ಪೊಲೀಸರು ಕ್ರೂರವಾಗಿ ನಡೆದುಕೊಂಡಿದ್ದಾರೆ. ಮಹಿಳಾ ಸಂಸದರ ಬಟ್ಟೆಯನ್ನು ಹರಿದು, ಕಾಲಿನಲ್ಲಿದ್ದ ಶೂಗಳನ್ನು ಕಿತ್ತುಕೊಂಡು ಅಪರಾಧಿಯ ರೀತಿಯಲ್ಲಿ ಕರೆದುಕೊಂಡು ಹೋಗಲಾಗಿದೆ ಎಂದು ಆರೋಪಿಸಲಾಗುತ್ತಿದೆ.

ದೆಹಲಿ ಪೊಲೀಸರು ತಮ್ಮೊಂದಿಗೆ ಯಾವ ರೀತಿ ವರ್ತಿಸಿದರು ಎಂಬುದನ್ನು ಸ್ವತಃ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ವಿಡಿಯೋ ತುಣುಕೊಂದರಲ್ಲಿ ವಿವರಿಸಿ ಹೇಳಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದೀಗ ಅದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮೂರು ದಿನಗಳಿಂದ ರಾಹುಲ್ ಗಾಂಧಿ ವಿಚಾರಣೆ: ಕಳೆದ ಮೂರು ದಿನಗಳಿಂದ ರಾಹುಲ್ ಗಾಂಧಿ ಅನ್ನು ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರದಿಂದ ಈವರೆಗೂ 30 ಗಂಟೆಗಳವರೆಗೆ ವಿಚಾರಣೆ ನಡೆಸಿದ್ದಾರೆ.

Delhi Police Brutally Attacked, Clothes Torn, Carried Like a Criminal With Congress MP Jothimani

ಗುರುವಾರದ ಮಟ್ಟಿಗೆ ಅಲ್ಪವಿರಾಮ ನೀಡಿರುವ ಇಡಿ ಅಧಿಕಾರಿಗಳು ಶುಕ್ರವಾರ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಬೆಳಗ್ಗೆ 11.35ರ ಸುಮಾರಿಗೆ ರಾಹುಲ್ ಗಾಂಧಿ ಆಗಮಿಸಿದರು. 3ನೇ ದಿನದಂದು, ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು.

ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು: ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಪ್ರಧಾನ ಕಚೇರಿ ಮತ್ತು ಇಡಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಹುಲ್ ಗಾಂಧಿಯನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ನಡುವೆ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಎಳೆದೊಯ್ದು ಬಸ್‌ಗಳಲ್ಲಿ ತುಂಬಿಸುತ್ತಿರುವ ವೀಡಿಯೊಗಳು ವೈರಲ್ ಆದವು.

Delhi Police Brutally Attacked, Clothes Torn, Carried Like a Criminal With Congress MP Jothimani

ಕೆಸಿ ವೇಣುಗೋಪಾಲ್, ಭೂಪೇಶ್ ಬಾಘೇಲ್ ಮತ್ತು ರಣದೀಪ್ ಸುರ್ಜೇವಾಲಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ಪ್ರಧಾನ ಕಚೇರಿಗೆ ಪೊಲೀಸರು ಬಲವಂತವಾಗಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+