ರಾಹುಲ್ ಗಾಂಧಿಗಾಗಿ ಹುಡುಕಾಟ, ಕೈಪಡೆ ಕಂಗಾಲು
ನವದೆಹಲಿ, ಮಾ. 14: ದೆಹಲಿ ಪೊಲೀಸರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರ ದೈಹಿಕ ಲಕ್ಷಣಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಸುದ್ದಿ ಕಾಂಗ್ರೆಸ್ ನಾಯಕರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಹುಲ್ ಗಾಂಧಿ ಹೋಲುವ ವ್ಯಕ್ತಿ ಹುಡುಕಾಟ ನಡೆಯುತ್ತಿದೆ ಎಂದು ಹೇಳಲಾಗಿದ್ದರೂ ಕಾಂಗ್ರೆಸ್ ನಾಯಕರು ಕೆಂಡಾಮಂಡಲವಾಗಿದ್ದಾರೆ.
ಈ ಘಟನೆಯಿಂದ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ನಾಯಕರು, ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ.ಕಳೆದ ವಾರ ಪೊಲೀಸರು ರಾಹುಲ್ ಕಛೇರಿಗೆ ದಿಢೀರ್ ಭೇಟಿ ನೀಡಿದ್ದರು ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಪೊಲೀಸರು, ರಾಹುಲ್ ಗಾಂಧಿ ಕಣ್ಣುಗಳು ಹಾಗೂ ಕೂದಲಿನ ಬಣ್ಣ ಮುಂತಾದ ದೈಹಿಕ ಲಕ್ಷಣಗಳ ಬಗ್ಗೆ ವಿಚಾರಿಸಿದ್ದಾರೆ. ರಾಹುಲ್ ಗಾಂಧಿ ನೋಡುವುದಕ್ಕೆ ಹೇಗಿದ್ದರು, ದಿನಂಪ್ರತಿ ಅವರು ಯಾವ ಯಾವ ಬಟ್ಟೆಗಳನ್ನು ಧರಿಸುತ್ತಿದ್ದರು, ಹಾಕುವ ಚಪ್ಪಲಿ, ಮುಖಚರ್ಯೆ, ಯಾರ ಜೊತೆ ಹೆಚ್ಚು ಒಡನಾಡಿಯಾಗಿದ್ದರು, ಎಲ್ಲಿ ತಂಗುತ್ತಿದ್ದರು, ಅವರ ದಿನಚರಿಗಳು ಹೇಗಿರುತ್ತವೆ ಎಂಬುದು ಸೇರಿದಂತೆ ಕಚೇರಿ ಸಿಬ್ಬಂದಿಗೆ ಪೊಲೀಸರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಇದರ ಹಿಂದೆ ಒಳಸಂಚು ಏನಾದರೂ ಇದೆಯೇ ಎಂಬ ಬಗ್ಗೆ ದಿಗಿಲುಗೊಂಡಿದ್ದಾರೆ.

ರಾಹುಲ್‌ಗಾಂಧಿ ಅವರ ಬಗ್ಗೆ ಮಾಹಿತಿ ಏಕೆ?: ರಾಹುಲ್ ಗಾಂಧಿ ಎಂದು ಗೂಗಲ್ ನಲ್ಲಿ ಟೈಪಿಸಿದರೆ ಅವರ ಭಾವಚಿತ್ರ ಅಥವಾ ದೈಹಿಕ ಲಕ್ಷಣಗಳ ಸಾಕಷ್ಟು ಮಾಹಿತಿ ಸಿಗುತ್ತದೆ. ಲೋಕಸಭಾ ಸದಸ್ಯರ ವಿವರ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಆಗಿದೆ. ಅವರ ಬಗ್ಗೆ ಸಂಸತ್ತಿನಲ್ಲೇ ಎಲ್ಲಾ ದಾಖಲೆಗಳೂ ದೊರಕುತ್ತದೆ. ಹೀಗಿದರೂ ರಾಹುಲ್ ಗಾಂಧಿ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದೇಕೆ ಎಂಬ ಪ್ರಶ್ನೆ ಕಾಡುತ್ತಿದೆ.
ರಾಹುಲ್ ಗಾಂಧಿ ಕಚೇರಿಗೆ ಏಕೆ ಭೇಟಿ ನೀಡಿದ್ದಾರೆ ಎಂಬ ಗುಟ್ಟನ್ನು ಪೊಲೀಸರು ಈವರೆಗೂ ರಟ್ಟು ಮಾಡಿಲ್ಲ. ಇದು ಖಾಸಗಿಯಾಗಿದ್ದು, ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.ದೆಹಲಿ ಪೊಲೀಸ್ ಆಯುಕ್ತರ ಕಛೇರಿ ಮುಂದೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ಚಿಂತನೆ ಮಾಡುತ್ತಿದ್ದಾರೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications