ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ: ಮಾಜಿ ಸಚಿವನ ಬದಲಿಗೆ ಆತನ ಪತ್ನಿಗೆ ಟಿಕೆಟ್

|
Google Oneindia Kannada News

ನವದೆಹಲಿ, ಜನವರಿ 21: ದೆಹಲಿ ಚುನಾವಣೆ 2020ಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ ಈಗ ಜನತೆಗೆ ಗ್ಯಾರಂಟಿ ಕಾರ್ಡ್ ಪ್ರಕಟಿಸಿದ್ದು ನೆನಪಿರಬಹುದು. ಈಗ ಅಭ್ಯರ್ಥಿಗಳ ಪಟ್ಟಿಯನ್ನು ಗಮನಿಸಿದರೆ ಮಾಜಿ ಸಚಿವ ಜಿತೇಂದ್ರ ಸಿಂಗ್ ತೋಮರ್ ಹೆಸರು ಅಭ್ಯರ್ಥಿಗಳ ಪಟ್ಟಿಯಲ್ಲಿ ಇಲ್ಲದಿರುವುದು ಎದ್ದು ಕಾಣುತ್ತದೆ. ಆದರೆ, ತೋಮರ್ ಬದಲಿಗೆ ಅವರ ಪತ್ನಿಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಲಾಗಿದೆ.

ಆಮ್ ಆದ್ಮಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಅಲ್ಕಾ ಲಂಬಾಗೆ ಟಿಕೆಟ್ ನೀಡಲಾಗಿದೆ. ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ತ್ರಿನಗರ್ ವಿಧಾನಸಭಾ ಕ್ಷೇತ್ರದಿಂದ ಜಿತೇಂದ್ರ ಸಿಂಗ್ ತೋಮಾರ್ ಸ್ಪರ್ಧಿಸುತ್ತಾರೆ ಎಂಬ ಸುದ್ದಿಯಿತ್ತು. ಈ ಬಾರಿ ಕಣಕ್ಕಿಳಿಯದಿರಲು ನಿರ್ಧರಿಸಿದ್ದಾರೆ. ಅವರ ಬದಲಿಗೆ ಪ್ರೀತಿ ತೋಮಾರ್ ಅವರು ಸ್ಪರ್ಧಿಸುವುದು ಖಚಿತವಾಗಿದೆ. ಪ್ರೀತಿ ತೋಮಾರ್ ಅವರು ಸೋಮವಾರದಂದು ನಾಮಪತ್ರ ಸಲ್ಲಿಸಿದ್ದಾರೆ.

ದೆಹಲಿಗಾಗಿ ''ಕೇಜ್ರಿವಾಲ್ ಕಾ ಗ್ಯಾರಂಟಿ ಕಾರ್ಡ್ದೆಹಲಿಗಾಗಿ ''ಕೇಜ್ರಿವಾಲ್ ಕಾ ಗ್ಯಾರಂಟಿ ಕಾರ್ಡ್" ಬಿಡುಗಡೆ

ಕಳೆದ ಚುನಾವಣೆಯಲ್ಲಿ ಆಯೋಗಕ್ಕೆ ತೋಮಾರ್ ನೀಡಿದ್ದ ದಾಖಲೆಗಳು ನಕಲಿ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. 2015ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೋಮಾರ್ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಅವರ ವಿದ್ಯಾರ್ಹತೆ ತಪ್ಪಾಗಿ ನಮೂದಾಗಿದೆ.

Delhi polls 2020: AAP drops Jitender Singh Tomar, gives ticket to wife

ದೆಹಲಿಯ 70 ಸ್ಥಾನಗಳ ಪೈಕಿ ಕಾಂಗ್ರೆಸ್ 54 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದೆ. 2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು.

ಗ್ಯಾಲರಿ: ದಿಲ್ಲಿ ಗಲ್ಲಿಗಲ್ಲಿಗಳಲ್ಲಿ ಚುನಾವಣೆ ರಂಗೋ ರಂಗು

ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ. ಈ ಬಾರಿ ಬಿಜೆಪಿ ಮಿತ್ರ ಪಕ್ಷ ಜೆಜೆಪಿ ಪಕ್ಷ ಕೂಡಾ ಕಣಕ್ಕಿಳಿಯಲಿದೆ. ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.

ದೆಹಲಿಯಲ್ಲಿ ಫೆಬ್ರವರಿ 08ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ. ಜನವರಿ 14ರಿಂದ ಚುನಾವಣಾ ಆಯೋಗ ಅಧಿಸೂಚನೆ ಜಾರಿಯಾಗಲಿದೆ. ಜನವರಿ 24ರೊಳಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಬಹುದು. 1998ರಿಂದ ದೆಹಲಿಯಲ್ಲಿ ಅಧಿಕಾರಕ್ಕೇರಲು ಸಾಹಸ ಪಟ್ಟು ಫಲ ಕಾಣದಿರುವ ಬಿಜೆಪಿಗೆ ಈ ಬಾರಿ ಅಧಿಕಾರಿ ಗದ್ದುಗೇರಲು ಭಾರಿ ತಂತ್ರಗಾರಿಕೆ ನಡೆಸಿದೆ.

English summary
Former minister Jitender Singh Tomar, who was declared as the AAP candidate from the Tri Nagar assembly constituency, said the party has decided that he will not fight the Delhi elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X