ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಂದಿನಿ ಚೌಕ್ ನಿಂದ ಅಲ್ಕಾ ಲಂಬಾ, 54 ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ

|
Google Oneindia Kannada News

ನವದೆಹಲಿ, ಜನವರಿ 19: ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಮ್ ಆದ್ಮಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಅಲ್ಕಾ ಲಂಬಾಗೆ ಟಿಕೆಟ್ ನೀಡಲಾಗಿದೆ.ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ದೆಹಲಿಯ 70 ಸ್ಥಾನಗಳ ಪೈಕಿ ಕಾಂಗ್ರೆಸ್ 54 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದೆ. ಅಲ್ಕಾ ಲಂಬಾ ಅವರು ಚಾಂದಿನಿ ಚೌಕ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಗಾಂಧಿನಗರದಿಂದ ಅರವಿಂದ್ ಸಿಂಗ್ ಲವ್ಲಿ, ದ್ವಾರಕಾದಿಂದ ಆದರ್ಶ್ ಶಾಸ್ತ್ರಿ ಕಣಕ್ಕಿಳಿಯುತ್ತಿದ್ದಾರೆ. ಪ್ರಚಾರ ಸಮಿತಿ ಮುಖ್ಯಸ್ಥ ಕೀರ್ತಿ ಅಜಾದ್ ಅವರ ಪತ್ನಿ ಪೂನಮ್ ಅಜಾದ್ ಅವರು ಸಂಗಂ ವಿಹಾರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ; ಎಎಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆದೆಹಲಿ ವಿಧಾನಸಭೆ ಚುನಾವಣೆ; ಎಎಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮಾಜಿ ಸಚಿವ ಅಶೋಕ್ ಕುಮಾರ್ ವಾಲಿಯಾ ಅವರು ಕೃಷ್ಣನಗರ ಕ್ಷೇತ್ರದಿಂದ, ಬಲ್ಲಿಮರಾನ್ ಕ್ಷೇತ್ರದಿಂದ ಹರೂನ್ ಯೂಸುಫ್ , ಸೀಲಂಪುರ್ ಕ್ಷೇತ್ರದಿಂಡ ಮತೀನ್ ಅಹ್ಮದ್ ಸ್ಪರ್ಧಿಸುತ್ತಿದ್ದಾರೆ.

Delhi polls: Congress releases list of 54 candidates; Alka Lamba to contest from Chandni Chowk

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು.

ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ. ಈ ಬಾರಿ ಬಿಜೆಪಿ ಮಿತ್ರ ಪಕ್ಷ ಜೆಜೆಪಿ ಪಕ್ಷ ಕೂಡಾ ಕಣಕ್ಕಿಳಿಯಲಿದೆ.ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.

ದೆಹಲಿ ಚುನಾವಣೆ: 57 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆದೆಹಲಿ ಚುನಾವಣೆ: 57 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ

ದೆಹಲಿಯಲ್ಲಿ ಫೆಬ್ರವರಿ 08ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ. ಜನವರಿ 14ರಿಂದ ಚುನಾವಣಾ ಆಯೋಗ ಅಧಿಸೂಚನೆ ಜಾರಿಯಾಗಲಿದೆ. ಜನವರಿ 24ರೊಳಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಬಹುದು. 1998ರಿಂದ ದೆಹಲಿಯಲ್ಲಿ ಅಧಿಕಾರಕ್ಕೇರಲು ಸಾಹಸ ಪಟ್ಟು ಫಲ ಕಾಣದಿರುವ ಬಿಜೆಪಿಗೆ ಈ ಬಾರಿ ಅಧಿಕಾರಿ ಗದ್ದುಗೇರಲು ಭಾರಿ ತಂತ್ರಗಾರಿಕೆ ನಡೆಸಿದೆ.

English summary
Congress on Saturday released list of candidates for 54 out of 70 seats for upcoming Delhi Assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X