ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ 3, 4ರಂದು ದೆಹಲಿ ರಣಕಹಳೆ ಊದಲಿರುವ ಮೋದಿ

|
Google Oneindia Kannada News

ನವದೆಹಲಿ, ಜನವರಿ 30: ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ಡೆ, ರಾಷ್ಟ್ರೀಯ ನಾಗರಿಕರ ನೋಂದಣಿ ಪರ-ವಿರೋಧ ಚರ್ಚೆ, ಪ್ರತಿಭಟನೆಗಳ ನಡುವೆ ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಭಾರತೀಯ ಜನತಾ ಪಕ್ಷ ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದೆ. ಈ ನಡುವೆ ಪ್ರಧಾನಿ ಮೋದಿ ಅವರು ಚುನಾವಣಾ ರಣಕಹಳೆ ಊದುವ ಮೂಲಕ ಪ್ರಚಾರಕ್ಕೆ ಇನ್ನಷ್ಟು ಹುರುಪು ತುಂಬಲಿದ್ದಾರೆ.

ಫೆಬ್ರವರಿ 3 ಹಾಗೂ 4 ರಂದು ದೆಹಲಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿರುವ ಮೋದಿ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಡಾ. ಹರ್ಷ್ ವರ್ಧನ್ ಗುರುವಾರದಂದು ತಿಳಿಸಿದರು.

ದೆಹಲಿ ಚುನಾವಣೆ: ಕೇಜ್ರಿವಾಲ್ ಗೆ ಶುಭ ಸುದ್ದಿ ಕೊಟ್ಟ ಸಮೀಕ್ಷೆ ದೆಹಲಿ ಚುನಾವಣೆ: ಕೇಜ್ರಿವಾಲ್ ಗೆ ಶುಭ ಸುದ್ದಿ ಕೊಟ್ಟ ಸಮೀಕ್ಷೆ

ಮೊದಲ ಚುನಾವಣಾ ಪ್ರಚಾರ ಸಭೆ ಕರ್ಕೊಡೂಮಾದ ಸಿಬಿಡಿ ಮೈದಾನದಲ್ಲಿ ಫೆಬ್ರವರಿ 03ರಂದು 2.30 ರ ವೇಳೆಗೆ ನಡೆಯಲಿದೆ. ಮುಂದಿನ ಪ್ರಚಾರ ಸಭೆ ಫೆಬ್ರವರಿ 04ರಂದು ದ್ವಾರಕದಲ್ಲಿರುವ ರಾಮ್ ಲೀಲಾ ಮೈದಾನದಲ್ಲಿ ನಡೆಯಲಿದೆ ಎಂದು ಹರ್ಷ್ ವರ್ಧನ್ ಹೇಳಿದರು.

Delhi polls: PM Modi to hold public meetings on Feb 3, 4

ಫೆಬ್ರವರಿ 6ರಂದು ಸಂಜೆ 5ರ ವೇಳೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ. ಫೆಬ್ರವರಿ.22ರಂದು ಪ್ರಸಕ್ತ ಸರ್ಕಾರದ ಅವಧಿ ಮುಕ್ತಾಯಗೊಳ್ಳಲಿದ್ದು, ಅಷ್ಟರೊಳಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಗ್ಯಾಲರಿ: ದಿಲ್ಲಿ ಗಲ್ಲಿಗಲ್ಲಿಗಳಲ್ಲಿ ಚುನಾವಣೆ ರಂಗೋ ರಂಗು

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ. ಈ ಬಾರಿ ಬಿಜೆಪಿ ಮಿತ್ರ ಪಕ್ಷ ಜೆಜೆಪಿ ಪಕ್ಷ ಕೂಡಾ ಕಣಕ್ಕಿಳಿಯಲಿದೆ. ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.

English summary
Prime Minister Narendra Modi will hold two public meetings in the national capital on February 3 and 4 ahead of the Delhi Assembly polls, Union Minister Harsh Vardhan said on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X