ದೆಹಲಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಖಾಸಗಿ ಕಚೇರಿಗಳು ಬಂದ್

ನವದೆಹಲಿ, ಜನವರಿ 11: ದೆಹಲಿಯಲ್ಲಿರುವ ಖಾಸಗಿ ಕಚೇರಿಗಳು ಅಗತ್ಯ ಸೇವೆಗಳ ನಿಮಯದಿಂದ ವಿನಾಯಿತಿ ಪಡೆದಿರುವ ವಲಯಗಳನ್ನು ಹೊರತುಪಡಿಸಿ ಉಳಿದವರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಿದೆ.

ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋವಿಡ್ ಸೋಂಕನ್ನು ತಡೆಗಟ್ಟಲು ಎಲ್ಲಾ ರೆಸ್ಟೋರೆಂಟ್ ಹಾಗೂ ಬಾರ್‌ಗಳನ್ನು ಮುಚ್ಚಲಾಗಿದ್ದು, ಟೇಕ್‌ಅವೇಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಮಂಗಳವಾರ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ದೇಶದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,58,75,790ಕ್ಕೆ ಏರಿಕೆಯಾಗಿದೆ.

delhi-private-offices-to-work-from-home-as-covid-19-cases-spike

69,959 ಸೋಂಕಿತರು ಗುಣಮಮುಖರಾಗಿದ್ದಾರೆ. 277 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 10. 64 ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆಯಾಗಿದೆ.

ಜನವರಿ 10 ರಂದು ಒಟ್ಟು 15,79,928 ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 69,31,55,280 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೆಹಲಿಯಾದ್ಯಂತ ಇರುವ ಕಾರಾಗೃಹಗಳಲ್ಲಿ ಈವರೆಗೂ 66 ಕೈದಿಗಳು ಮತ್ತು 46 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿದೆ.

ಪಂಚ ರಾಜ್ಯ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರನ್ನಾಗಿ ಪರಿಗಣಿಸಿರುವುದರಿಂದ ಅವರು ಬೂಸ್ಟರ್ ಡೋಸ್‌ ಪಡೆಯಲು ಅರ್ಹರಾಗಿರುತ್ತಾರೆ.

ಮುನ್ನೆಚ್ಚರಿಕೆಯ ಲಸಿಕೆ ಡೋಸ್‌ಗಳಿಗೆ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅರ್ಹರು ನೇರವಾಗಿ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಬಹುದು ಅಥವಾ ಯಾವುದೇ ಲಸಿಕಾ ಕೇಂದ್ರಕ್ಕೆ ಹೋಗಬಹುದು. ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್‌ಗಳ ಕುರಿತು ಇನ್ನೂ ಸಹ ಯಾವುದೇ ನಿರ್ಧಾರವಿಲ್ಲ.

ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಮಾತ್ರವಲ್ಲದೇ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಇತರ ದೀರ್ಘಕಾಲದ ಕಾಯಿಲೆಗಳಂತಹ ಅಸ್ವಸ್ಥತೆ ಹೊಂದಿರುವ 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯ ಮೇರೆಗೆ "ಮುನ್ನೆಚ್ಚರಿಕೆ ಡೋಸ್" ಅನ್ನು ಪಡೆಯುವ ಆಯ್ಕೆಯನ್ನು ಹೊಂದಿರುತ್ತಾರೆ. ಬೂಸ್ಟರ್ ಡೋಸ್​​​ಗಳಿಗೆ ಅರ್ಹರಾಗಿರುವವರು, ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಮಾತ್ರ ಅವುಗಳನ್ನು ಪಡೆಯಬೇಕು.

ಬೂಸ್ಟರ್ ಡೋಸ್ ಬಗ್ಗೆ ಇದ್ದ ಗೊಂದಲಕ್ಕೆ ಕೊನೆಗೂ ಕೇಂದ್ರ ಸರ್ಕಾರ ತೆರೆ ಎಳೆಯುವ ಕೆಲಸ ಮಾಡಿದೆ. ಬೂಸ್ಟರ್ ಡೋಸ್ ಮಿಶ್ರಣ ಯಾವುದೇ ಕಾರಣಕ್ಕೂ ಮಿಶ್ರಣ ಇಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಮೊದಲು ಕೊಟ್ಟಂತೆಯೇ ಬೂಸ್ಟರ್ ಲಸಿಕೆ ನೀಡಲಾಗುತ್ತದೆ ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ.

ಈ ಹಿಂದೆ ಮೊದಲ, ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್​ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ. ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಕೇಂದ್ರ ನೀತಿ ಆಯೋಗದ ಸದಸ್ಯ ಡಾ.ವಿಕೆ ಪಾಲ್ ಸ್ಪಷ್ಟನೆ ನೀಡಿದ್ದಾರೆ.

ಪ್ರತಿ 100 ಡೆಲ್ಟಾ ಪ್ರಕರಣಗಳಿಗೆ , 400-500 ಓಮಿಕ್ರಾನ್ ಪ್ರಕರಣಗಳಿರಬಹುದು ಎಂದು ಹೇಳಲಾಗಿದೆ. ಕೊರೊನಾ ಮೂರನೇ ಅಲೆಯಲ್ಲಿ ಶೇ.5 ರಿಂದ 10 ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಎರಡನೇ ಕೊರೊನಾ ಅಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗುವವರ ಪ್ರಮಾಣ ಶೇ.20-30ರ ವ್ಯಾಪ್ತಿಯಲ್ಲಿತ್ತು ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.

ಹಿಂದಿನ ಅಲೆಗಿಂತ ಈ ಅಲೆ ಭಾರಿ ತೀವ್ರವಾಗಿರಬಹುದು ಎಂದು ಹೇಳಲಾಗಿದೆ, ಪ್ರತಿ 100 ಡೆಲ್ಟಾ ಪ್ರಕರಣಗಳಿಗೆ 400-500 ಓಮಿಕ್ರಾನ್ ಪ್ರಕರಣಗಳು ಇರಬಹುದು ಎಂದು ಎಚ್ಚರಿಸಿದೆ.

ಅಲೆಯಲ್ಲಿ ಪ್ರತಿ 125-350 ಪ್ರಕರಣಗಳಲ್ಲಿ 100 ಮಂದಿ ಆಸ್ಪತ್ರೆಗೆ ದಾಖಲಾಗಿರಬಹುದು. ದೇಶಾದ್ಯಂತ ಇಂದಿನಿಂದ ಮುನ್ನೆಚ್ಚರಿಕೆಯ ಕೋವಿಡ್‌ ಲಸಿಕೆ ಡೋಸ್ ನೀಡಿಕೆ ಅಭಿಯಾನ ಆರಂಭಗೊಳ್ಳಲಿದೆ. ಆರೋಗ್ಯ ಸಿಬ್ಬಂದಿ, ಕೋವಿಡ್ ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ವೃದ್ದರಿಗೆ ಮುನ್ನೆಚ್ಚರಿಕೆಯ ಡೋಸ್ ನೀಡಿಕೆ ಆರಂಭವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+