ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

18 ವರ್ಷಗಳ ಬಳಿಕ ಮೇ ತಿಂಗಳಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ಕಂಡ ದೆಹಲಿ

|
Google Oneindia Kannada News

ನವದೆಹಲಿ, ಮೇ 27: ದೆಹಲಿಯಲ್ಲಿ 2002ರ ಬಳಿಕ ಮೇ ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ದೆಹಲಿಯ ಸಫ್ದರ್‌ಜುಂಗ್‌ನಲ್ಲಿ 46 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಗೆಯೇ ಬಿಸಿ ಗಾಳಿ ಮುಂದುವರೆದಿದ್ದು, ಪಲಮ್ ಪ್ರದೇಶದಲ್ಲಿ 47.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ರಾಜಸ್ಥಾನ ವಿಶ್ವದ ಹಾಟೆಸ್ಟ್‌ ಸಿಟಿ: ಎಲ್ಲೆಲ್ಲಿ ಗರಿಷ್ಠ ಉಷ್ಣಾಂಶ ಎಷ್ಟಿದೆ? ರಾಜಸ್ಥಾನ ವಿಶ್ವದ ಹಾಟೆಸ್ಟ್‌ ಸಿಟಿ: ಎಲ್ಲೆಲ್ಲಿ ಗರಿಷ್ಠ ಉಷ್ಣಾಂಶ ಎಷ್ಟಿದೆ?

ಸಫ್ದರ್‌ಜುಂಗ್‌ನಲ್ಲಿ 2002ರ ಮೇ 19 ರಂದು 46 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು ಎಂದು ಕೇಂದ್ರ ಹವಾಮಾನ ಇಲಾಖೆ ಮುಖ್ಯಸ್ಥ ಕುಲ್ದೀಪ್ ಶ್ರೀವಾಸ್ತವ್ ಹೇಳಿದ್ದಾರೆ.

Delhi Recorded The Hottest Day In May In The Last 18 Years

ಪಲಮ್‌ನಲ್ಲಿ ಈಗ 47.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದ್ದು 2010 ರ ಮೇ 18ರಂದ ಇಷ್ಟು ಉಷ್ಣಾಂಶ ದಾಖಲಾಗಿತ್ತು. ಲೋಧಿ ರಸ್ತೆ ಆಯ ನಗರದಲ್ಲಿ 45.4 ಡಿಗ್ರಿ ಹಾಗೂ 46.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

45 ಡಿಗ್ರಿ ಸೆಲ್ಸಿಯಸ್ ಇದ್ದ ಗರಿಷ್ಠ ಉಷ್ಣಾಂಶ ಬಿಸಿ ಗಾಳಿಯಿಂದಾಗಿ ಕಳೆದ ಎರಡು ದಿನಗಳಲ್ಲಿ 47 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ.ಗುರುವಾರ ಕೂಡ ಬಿಸಿಗಾಳಿ ಬೀಸಬಹುದು ಎಂದು ಅಂದಾಜಿಸಲಾಗಿದೆ. ಗಾಳಿಯು ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ.

ಇನ್ನು ಬಿಹಾರದ ಮಜಾಫರ್‌ಪುರ್‌ನಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಹಿಮಾಚಲ ಪ್ರದೇಶದಲ್ಲೂ ಕೂಡ ಉಷ್ಣಾಂಶ ಹೆಚ್ಚಾಗುತ್ತಿದೆ.

ಶಿಮ್ಲಾದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಇದು ಸಾಮಾನ್ಯ ಉಷ್ಣಾಂಶಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ. ಊನಾದಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ದೆಹಲಿಯ ಮಯ್ಯೂರ್ ವಿಹಾರ್ ಪ್ರದೇಶದಲ್ಲಿ 47.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಅದರ ಜೊತೆಗೆ ದಖ್ಖನ್ ಪ್ರಸ್ಥಭೂಮಿಯಲ್ಲಿರುವ ನೆರೆಯ ಆಂಧ್ರದ ರಾಯಲಸೀಮಾ, ಯಾಣಂ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಪಂಜಾಬ್‌,ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿಯೂ ಬಿಸಿಗಾಳಿ ಬೀಸಲಿದೆ ಎಂದು ಐಎಂಡಿ ಎಚ್ಚರಿಸಿದೆ.

English summary
Delhi Records Hottest May Day Since 2002 Amid Severe Heatwave as the maximum temperature at the Safdarjung observatory rose to 46 degrees Celsius on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X