ದೆಹಲಿ:10 ತಿಂಗಳಲ್ಲಿ ಮೊದಲ ಬಾರಿಗೆ ಕಡಿಮೆ ಕೊರೊನಾ ಸೋಂಕಿತರು ಪತ್ತೆ
ದೆಹಲಿ, ಫೆಬ್ರವರಿ 01: ದೆಹಲಿಯಲ್ಲಿ ಕಳೆದ ಹತ್ತು ತಿಂಗಳ ಬಳಿಕ ಮೊದಲ ಬಾರಿಗೆ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 121 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಮೂರು ಮಂದಿ ಮೃತಪಟ್ಟಿದ್ದಾರೆ.32 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇದು ಕೂಡ ಕಳೆದ 10 ತಿಂಗಳಲ್ಲಿ ಕಂಡು ಬಂದ ಕಡಿಮೆ ಸಂಖ್ಯೆಯಾಗಿದೆ.
10,856 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ, ಒಟ್ಟು 6,35,217 ಮಂದಿ ಕೊರೊನಾ ಸೋಂಕಿತರಿದ್ದಾರೆ. ಒಟ್ಟು 43,712 ಮಂದಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು ಅದರಲ್ಲಿ 121 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

29,730 ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗಿದೆ. 14,342 ರಾಪಿಡ್ ಆಂಟಿಜನ್ ಪರೀಕ್ಷೆ ನಡೆಸಲಾಗಿದೆ.ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,427 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,07,57,610ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಇನ್ನು ಒಂದೇ ದಿನ ಮಹಾಮಾರಿ ವೈರಸ್ 118 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,54,392ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟಾರೆ 1,07,57,610 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 11,858 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,04,34,983ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 1,68,235 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.












Click it and Unblock the Notifications