ದೆಹಲಿಯಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣಗಳಲ್ಲಿ ಗಣನೀಯ ಇಳಿಕೆ
ನವದೆಹಲಿ, ಮೇ 24: ದೆಹಲಿಯಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಷ್ಟ್ರರಾಜಧಾನಿಯಲ್ಲಿ 1550 ಹೊಸ ಕೊರೊನಾ ವೈರಸ್ ಪ್ರಕರಣಗಳು ಮಾತ್ರವೇ ಪತ್ತೆಯಾಗಿದೆ. 4375 ಜನರು ಈ ವೈರಸ್‌ನಿಂದ ಚೇತರಿಕೆಯನ್ನು ಕಂಡಿದ್ದು 207 ಜನರು ಕಳೆದ 24 ಗಂಟೆಗಳ ಅವಧಿಯಲ್ಲಿ ಈ ವೈರಸ್‌ಗೆ ಬಲಿಯಾಗಿದ್ದಾರೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ 30ರ ನಂತರ ದಾಖಲಾದ ಅತಿ ಕಡಿಮೆ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಇದಾಗಿದೆ. ಅಂದು 992 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿತ್ತು. ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 61,506 ಕೊರೊನಾ ಪರೀಕ್ಷೆಯನ್ನು ನಡೆಸಲಾಗಿದೆ. ಪಾಸಿಟಿವಿಟಿ ದರ 2.52 ಶೇಕಡಾ ಇದೆ.
ಈ ಮೂಲಕ ದೆಹಲಿಯಲ್ಲಿ ಈವರೆಗೆ 14,18,418 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 13,70,431 ಕೊರೊನಾ ವೈರಸ್ ಸೋಂಕಿತರು ಚೇತರಿಕೆಯನ್ನು ಕಂಡಿದ್ದರೆ 23,409 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಈ ಸೋಂಕಿಗೆ ಮೃತಪಟ್ಟವರ ಪ್ರಮಾಣ 1.65 ಶೇಕಡಾ ಇದೆ. ದೆಹಲಿಯಲ್ಲಿ ಈಗ 24,578 ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳು ಇದೆ. ಇದು ಏಪ್ರಿಲ್ 8ರ ನಂತರದ ಅತಿ ಕಡಿಮೆ ಸಂಖ್ಯೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ ಕೇವಲ 4,717 ಜನರು ಮಾತ್ರವೇ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಇದರಲ್ಲಿ 4,471 ಜನರು ಮೊದಲ ಡೋಸ್ ಪಡೆದುಕೊಂಡಿದ್ದರೆ 246 ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. 50,86,615 ಜನರು ದೆಹಲಿಯಲ್ಲಿ ಈವರೆಗೆ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. 39,34,648 ಜನರು ಮೊದಲ ಡೋಸ್ ಪಡೆದುಕೊಂಡಿದ್ದರೆ 11,51,967 ಜನರು ಎರಡೂ ಡೋಸ್ ಪಡೆದವರಾಗಿದ್ದಾರೆ.
ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಲಾಕ್‌ಡೌನ್‌ಅನ್ನು ಒಂದು ವಾರಗಳ ಕಾಲ ವಿಸ್ತರಿಸಲಾಗಿದೆ. ಭಾನುವಾರ ಈ ಬಗ್ಗೆ ನಿರ್ಧಾರವನ್ನು ಪ್ರಕಟಿಸಿರುವ ಅರವಿಂದ ಕೇಜ್ರಿವಾಲ್ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಮೇ 31ರವರೆಗೆ ಲಾಕ್‌ಡೌನ್ ಮುಂದುವರಿಯಲಿದೆ.












Click it and Unblock the Notifications