• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ 1568 ಹೊಸ ಕೋವಿಡ್ ಪ್ರಕರಣ ದಾಖಲು

|

ನವದೆಹಲಿ, ಮೇ, 25: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1568 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ದೆಹಲಿಯಲ್ಲಿ ಈವರೆಗಿನ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 14.19 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ 14 ಗಂಟೆಗಳಲ್ಲಿ 156 ಕೊರೊನಾ ಸೋಂಕಿತರು ಮೃತಪಟ್ಟಿದ್ದು ಸಾವಿನ ಸಂಖ್ಯೆ 23,565 ಆಗಿದೆ.

24 ಗಂಟೆಗಳ ಅವಧಿಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಏಪ್ರಿಲ್ 1ರ ನಂತರ ಬಂದ ಅತಿ ಕಡಿಮೆ ವರದಿ ಇದಾಗಿದೆ. ಮತ್ತೊಂದೆಡೆ ದೆಹಲಿಯಲ್ಲಿ ಕೊರೊನಾ ವೈರಸ್ ಪಾಸಿಟಿವಿಟಿ ದರ ಮತ್ತಷ್ಟು ಕಡಿಮೆಯಾಗಿದ್ದು 2.14 ಶೇಕಡಾಗೆ ಇಳಿಕೆಯಾಗಿದೆ.

ಒಟ್ಟಾರೆ ದೆಹಲಿಯಲ್ಲಿ ಈವರೆಗೆ 14,19,986 ಜನರು ಕೊರೊನಾ ವೈರಸ್‌ಗೆ ತುತ್ತಾದಂತಾಗಿದೆ. 13,74,682 ಸೋಂಕಿತರು ಗುಣಮುಖರಾಗಿದ್ದು, 21,739 ಕೊರೊನಾ ಪ್ರಕರಣಗಳು ಸಕ್ರಿಯವಾಗಿದೆ. ಇದರಲ್ಲಿ 11,915 ಜನರು ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ದೆಹಲಿ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 73,406 ಕೊರೊನಾ ಪರೀಕ್ಷೆಯನ್ನು ನಡೆಸಲಾಗಿದೆ. ತಜ್ಞರ ಅಭಿಪ್ರಾಯದ ಪ್ರಕಾರ ದೆಹಲಿಯಲ್ಲಿ ಲಾಕ್‌ಡೌನ್ ಮಾಡಿರುವುದು ಪ್ರಕರಣಗಳ ಗಣನೀಯ ಇಳಿಕೆಗೆ ಕಾರಣವಾಗಿದೆ. ಸದ್ಯ ಈ ಲಾಕ್‌ಡೌನ್‌ಅನ್ನು ಮೇ 31ರವರೆಗೂ ವಿಸ್ತರಿಸಲಾಗಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1,95,815 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ವೈರಸ್‌ನ ಪ್ರಕರಣಗಳ ಸಂಖ್ಯೆ 2,69,47,496ಕ್ಕೆ ಏರಿಕೆಯಾದಂತಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಒಟ್ಟು 3,511 ಜನರು ಈ ವೈರಸ್‌ಗೆ ಪ್ರಾಣವನ್ನು ಕಳೆದುಕೊಂಡಿದ್ದಾರೆ.

English summary
Delhi reported 1,568 covid 19 new cases last 24 hour, positivity rate drops to 2.14%.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X