• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿಯಲ್ಲಿ 83 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

|

ನವದೆಹಲಿ, ಜೂನ್ 29: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿ ದಾಟಿದೆ. ಕೊರೊನಾ ವೈರಸ್‌ನಿಂದ ಸಾವು ಮತ್ತು ಸೋಂಕಿತರ ಸಂಖ್ಯೆ ಕಡಿಮೆ ಮಾಡಲು ದೆಹಲಿ ಸರ್ಕಾರ ಹರಸಾಹಸ ಪಡುತ್ತಿದ್ದರೂ ಈ ಸಂಖ್ಯೆಗಳು ಕಡಿಮೆಯಾಗುತ್ತಲೇ ಇಲ್ಲ.

ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2889 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 83077ಕ್ಕೆ ಏರಿಕೆಯಾಗಿದೆ.

ಭಾರತ; ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

ದೆಹಲಿ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಅನ್ವಯ ದೆಹಲಿಯಲ್ಲಿ ಈ ವರೆಗೂ 52,607 ಮಂದಿ ಸೋಂಕಿತರು ಗುಣಮುಖರಾಗಿದ್ದು, 27847 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿ ಈ ವರೆಗೂ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2623ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಪ್ರತಿನಿತ್ಯ 20 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪರೀಕ್ಷೆ ಮಾಡುತ್ತಿದೆ.ಭಾರತದಲ್ಲಿ ಭಾನುವಾರ ಒಂದೇ ದಿನ 19,906 ಪ್ರಕರಣಗಳು ಪತ್ತೆಯಾಗಿತ್ತು.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಲ್ಲಿ ಕೊರೊನಾ ವೈರಸ್ ಹೆಚ್ಚು ಇರುವ ಪಟ್ಟಿಯಲ್ಲಿ ದೇಶ 4ನೇ ಸ್ಥಾನದಲ್ಲಿದೆ.

English summary
Delhi reports 2889 new COVID19 positive cases and 65 deaths today. Total number of cases stands at 83077 including 27847 active cases, 52607 recovered,discharged,migrated cases and 2623 deaths.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X