ದೆಹಲಿಯಲ್ಲಿ 635 ಹೊಸ ಕೇಸ್, ಸೋಂಕಿತರ ಸಂಖ್ಯೆ 14,000ಕ್ಕೆ ಏರಿಕೆ
ದೆಹಲಿ, ಮೇ 25: ರಾಷ್ಟ್ರ ರಾಜಧಾನಿಯಲ್ಲಿಂದು 635 ಕೊರೊನಾ ಕೇಸ್‌ಗಳು ಪತ್ತೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,053ಕ್ಕೆ ಏರಿಕೆಯಾಗಿದೆ.
Recommended Video
ಇದುವರೆಗೂ 276 ಜನರು ಕೊರೊನಾ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸ್ತುತ 7006 ಪ್ರಕರಣಗಳು ಸಕ್ರಿಯವಾಗಿದೆ. 6771 ಜನರು ಕೊವಿಡ್ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಬಿಟ್ಟರೆ ದೆಹಲಿಯಲ್ಲಿ ಅತಿ ಹೆಚ್ಚು ಕೊರೊನಾ ಕೇಸ್ ದಾಖಲಾಗಿದೆ. ಅದರಲ್ಲೂ ಲಾಕ್‌ಡೌನ್‌ನಿಂದ ಸಡಿಲಿಕೆ ನೀಡಿದ ಬಳಿಕ ಕೇಸ್‌ಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ.

ಆದರೂ, ದೆಹಲಿಯಲ್ಲಿ ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣದಲ್ಲಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹೊಸ ಕೊವಿಡ್ ಸೋಂಕಿತರು ಹೆಚ್ಚುತ್ತಿದ್ದಾರೆ. ಅದೇ ರೀತಿ ಚೇತರಿಕೆ ಕಾಣುವವರ ಸಂಖ್ಯೆಯೂ ಅಧಿಕವಾಗಿದೆ. ಹಾಗಾಗಿ, ಚಿಂತೆ ಮಾಡಬೇಕಾದ ಅನಿವಾರ್ಯತೆ ಇಲ್ಲ ಎಂದು ಸಿಎಂ ಹೇಳಿದ್ದಾರೆ.
ಕಳೆದ ಒಂದು ವಾರದಿಂದ ದೆಹಲಿಯಲ್ಲಿ ಪ್ರತಿದಿನವೂ 500 ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಶುಕ್ರವಾರ 660 ಜನರಿಗೆ ಸೋಂಕು ದೃಢವಾಗಿತ್ತು. ಇಲ್ಲಿಯವರೆಗೂ ಒಟ್ಟು 1,74,469 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದೆಹಲಿಯಲ್ಲಿ 3,421 ಜನರು ಕ್ವಾರಂಟೈನ್‌ನಲ್ಲಿದ್ದಾರೆ.
ಇನ್ನು ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1.40ಕ್ಕೆ ಏರಿಕೆಯಾಗಿದೆ. 77,103 ಕೇಸ್‌ಗಳ ಸಕ್ರಿಯವಾಗಿದ್ದು, 57,721 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.












Click it and Unblock the Notifications