ದೆಹಲಿಯಲ್ಲಿ ಎರಡನೇ ದಿನ 40 ಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿ

ನವದೆಹಲಿ, ಸೆಪ್ಟೆಂಬರ್ 28: ದೆಹಲಿಯಲ್ಲಿ ಎರಡನೇ ದಿನವೂ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 40ಕ್ಕಿಂತಲೂ ಹೆಚ್ಚಿದೆ.

ಇನ್ನೇನು ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವಾಗಲೇ ಎರಡನೇ ಅಲೆ ಆರಂಭವಾಗಿ ತಾರಕಕ್ಕೇರಿದೆ.ಭಾನುವಾರ 42 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಶನಿವಾರ 46 ಮಂದಿ ಮೃತಪಟ್ಟಿದ್ದರು.

ಇದುವರೆಗೆ ಒಟ್ಟು 5235 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3292 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 2,71,114 ಪ್ರಕರಣಗಳಿವೆ.
ಒಂದು ದಿನದಲ್ಲಿ 3739 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 2,36,651 ಮಂದಿ ಚೇತರಿಸಿಕೊಂಡಿದ್ದಾರೆ.

Delhi Reports Over 40 COVID-19 Deaths For Second Day

ಒಂದೇ ದಿನದಲ್ಲಿ 51,416 ಪರೀಕ್ಷೆಗಳನ್ನು ನಡೆಸಲಾಗಿದೆ. ಅದರಲ್ಲಿ 11,141 ಆರ್‌ಟಿಪಿಸಿಆರ್, 40,002 ಆಂಟಿಜೆನ್ಸ್ ಒಳಗೊಂಡಿದೆ.ದೆಹಲಿಯಲ್ಲಿ 2380 ಕಂಟೈನ್ಮೆಂಟ್ ಜೋನ್‌ಗಳಿವೆ. ಅಲ್ಲಿ ಒಟ್ಟು 29,24,754 ಪರೀಕ್ಷೆಗಳನ್ನು ಮಾಡಿಸಲಾಗಿದೆ.

ವಿವಿಧ ಆಸ್ಪತ್ರೆಗಳಲ್ಲಿ 15,380 ಹಾಸಿಗೆಗಳು ಲಭ್ಯವಿದೆ. ಭಾರತದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ವೇಗವಾಗಿ ಏರಿಕೆ ಕಾಣುತ್ತಿದ್ದು ಕಳೆದ 24 ಗಂಟೆಗಳಲ್ಲಿ 82,170 ಹೊಸ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಜೊತೆಗೆ 1,039 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು 60 ಲಕ್ಷ ದಾಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+