• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಹಿಂಸಾಚಾರ: ತನಿಖಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

|

ನವದೆಹಲಿ, ಮೇ 29: ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ತನಿಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಶುಕ್ರವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರ ರಿಮ್ಯಾಂಡ್ ಹೋಮ್ ಗೆ ಸಲ್ಲಿಸುವ ಅರ್ಜಿಯನ್ನು ವಿಚಾರಣೆ ನಡೆಸುವಾಗ ತನಿಖಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದೆ‌.

ದೆಹಲಿ ಹಿಂಸಾಚಾರಿಗಳಿಗೆ ಪಿಸ್ತೂಲ್ ಸಿಕ್ಕಿದ್ದು ಹೇಗೆ? ಸ್ಫೋಟಕ ಮಾಹಿತಿ

ಗಲಭೆಗೆ ಸಂಬಂಧಿಸಿದ ಪ್ರಕರಣದ ತನಿಖೆ "ಒಂದು ದಿಕ್ಕಿನೆಡೆಗೆ ಮಾತ್ರ ಗುರಿಯಾಗಿರುವಂತೆ ತೋರುತ್ತದೆ. ಇದುವರೆಗೆ ಯಾವ ತನಿಖೆ ನಡೆಸಲಾಗಿದೆ ಎಂಬುದನ್ನು ಸೂಚಿಸುವಲ್ಲಿ ದೆಹಲಿ ಪೊಲೀಸರು ವಿಫಲರಾಗಿದ್ದಾರೆ. ನ್ಯಾಯಯುತ ತನಿಖೆ ಹೇಗೆ ನಡೆಯುತ್ತಿದೆ ಎಂದು ಕೋರ್ಟ್ ದೆಹಲಿ ಪೊಲೀಸರನ್ನು ಕೇಳಿದೆ.

24 ವರ್ಷದ ವಿದ್ಯಾರ್ಥಿ ಆಸೀಪ್ ಇಕ್ಬಾಲ್ ತನ್ಹಾ ಸಿಎಎ ವಿರೋಧಿ ಹೋರಾಟದ ವೇಳೆ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಆಸೀಪ್ ಪೊಲೀಸರು ತನ್ನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ತನ್ನನ್ನು ರಿಮಾಂಡ್ ಹೋಮ್ ಗೆ ಸಲ್ಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ದೆಹಲಿಯ ನಡುರಸ್ತೆಯಲ್ಲಿ ಗುಂಡು ಹಾರಿಸಿದವನಿಗೆ ನ್ಯಾಯಾಂಗ ಬಂಧನ

ಕಳೆದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಸಿಎಎ ವಿರೋಧಿ ಹೋರಾಟದಲ್ಲಿ ಭಾರೀ ಹಿಂಸಾಚಾರ ಸಂಭವಿಸಿ, ವಿವಾದ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. 60 ಜನ ಮೃತಪಟ್ಟಿದ್ದರು.

English summary
Delhi Riot: Patiala House Court Upset With Police Investigation. Court Friday hearing the a student petition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X