ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಗಲಭೆ: ಸ್ವತಂತ್ರ ತನಿಖೆಗೆ ಮುಂದಾದ ನಾಗರಿಕ ಸಮಿತಿ

|
Google Oneindia Kannada News

ನವದೆಹಲಿ, ಅ. 11: ದೆಹಲಿಯ ಪೂರ್ವ ಭಾಗದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆದ ಗಲಭೆ, ಹಿಂಸಾಚಾರದ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ನಾಗರಿಕ ಸಮಿತಿ ಮುಂದಾಗಿದೆ. ಅಖಿಲ ಭಾರತ ಹಾಗೂ ಕೇಂದ್ರೀಯ ಸೇವೆಗಳಿಗೆ ಸೇರಿದ ಮಾಜಿ ಉದ್ಯೋಗಿಗಳ ಒಕ್ಕೂಟವು ಸಾಂವಿಧಾನಿಕ ನಡವಳಿಕೆ ಸಂಘಟನೆಯನ್ನು ಘೋಷಿಸಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರ, ಪ್ರಾಣಹಾನಿ, ಸಮುದಾಯಗಳ ನಡುವಿನ ಸಂಘರ್ಷ, ಗಲಭೆ ನಂತರದ ಬೆಳವಣಿಗೆಗಳು, ಸ್ಥಳೀಯರಿಗೆ ಆಗಿರುವ ನಷ್ಟ ಎಲ್ಲವನ್ನು ಪರಿಶೀಲಿಸಿ ತನಿಖೆ ನಡೆಸಲಿದ್ದೇವೆ ಎಂದು ತಜ್ಞರ ಸಮಿತಿ ಹೇಳಿದೆ. ಈ ಸಮಿತಿಯಲ್ಲಿ ನಾಲ್ವರು ಸುಪ್ರೀಂಕೋರ್ಟಿನ ನಿವೃತ್ತ ಜಡ್ಜ್, ಇಬ್ಬರು ನಾಗರಿಕ ಸೇವಾ ಅಧಿಕಾರಿಗಳಿರಲಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆ ಹಿಂದೆ ಸರ್ಕಾರ ಉರುಳಿಸುವ ಸಂಚು: ಪೊಲೀಸರ ವರದಿಸಿಎಎ ವಿರೋಧಿ ಪ್ರತಿಭಟನೆ ಹಿಂದೆ ಸರ್ಕಾರ ಉರುಳಿಸುವ ಸಂಚು: ಪೊಲೀಸರ ವರದಿ

ದೆಹಲಿ ಗಲಭೆ ಹತ್ತಿಕ್ಕಲು ಹಾಗೂ ನಂತರದ ಬೆಳವಣಿಗೆಗಳನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿವೆ. ಗಲಭೆಗೆ ಹಾಗೂ ಅದಕ್ಕೆ ಕಾರಣವಾದ ಘಟನಾವಳಿಗಳ ಬಗ್ಗೆ ಸಮಿತಿಯು ತನಿಖೆ ನಡೆಸಲಿದೆ. ಪೊಲೀಸರು ನಡೆಸಿರುವ ತನಿಖೆ ಹಾಗೂ ನೀಡಿರುವ ವರದಿ ಬಗ್ಗೆ ಟೀಕೆಗಳು, ಲೋಪಗಳು ಕೇಳಿ ಬಂದಿವೆ. ಘಟನೆಯಲ್ಲಿ ಸಾಮಾಜಿಕ ಜಾಲ ತಾಣಗಳ ದುರ್ಬಳಕೆ ಹೇಗೆ ಆಗಿತ್ತು ಎಂಬುದನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.

ಪೊಲೀಸರು 17,500 ಪುಟಗಳ ವರದಿ ಸಲ್ಲಿಸಿದ್ದಾರೆ

ಪೊಲೀಸರು 17,500 ಪುಟಗಳ ವರದಿ ಸಲ್ಲಿಸಿದ್ದಾರೆ

ಫೆಬ್ರವರಿಯಲ್ಲಿ ನಡೆದಿದ್ದ ಸಿಎಎ/ಎನ್‌ಎಸಿ ವಿರೋಧಿ ಪ್ರತಿಭಟನೆಯ ವೇಳೆ ಪೂರ್ವ ದೆಹಲಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಪೊಲೀಸರು 17,500 ಪುಟಗಳ ವರದಿ ಸಲ್ಲಿಸಿದ್ದು, ಅದರಲ್ಲಿ 15 ಆರೋಪಿಗಳನ್ನು ಮತ್ತು ಏಳು ವಾಟ್ಸಾಪ್ ಚಾಟ್ ಗುಂಪುಗಳನ್ನು ಹೆಸರಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರದ ಕುರಿತು ದೆಹಲಿ ವಿಶೇಷ ಪೊಲೀಸ್ ಘಟಕ 2,695 ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದೆ.

ಆರೋಪಪಟ್ಟಿಯಲ್ಲಿ ಎಎಪಿಯ ಮಾಜಿ ಕೌನ್ಸಿಲರ್ ತಾಹೀರ್

ಆರೋಪಪಟ್ಟಿಯಲ್ಲಿ ಎಎಪಿಯ ಮಾಜಿ ಕೌನ್ಸಿಲರ್ ತಾಹೀರ್

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ಸಂಚಿಗೆ ಸಂಬಂಧಿಸಿದಂತೆ ಯುಎಪಿಎ ಅಡಿ 15 ಮಂದಿಯ ವಿರುದ್ಧ ದೋಷಾರೋಪ ಸಲ್ಲಿಸಿದೆ. ಈ ಆರೋಪಪಟ್ಟಿಯಲ್ಲಿ ಎಎಪಿಯ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್, ಪಿಂಜ್ರಾ ಟೋಡ್‌ನ ದೇವಾಂಗನಾ ಕಲಿತಾ ಮತ್ತು ನತಾಶಾ ನರ್ವಾಲ್, ದೆಹಲಿ ಯುನಿವರ್ಸಿಟಿಯ ಮಾಜಿ ವಿದ್ಯಾರ್ಥಿ ಗುಲ್ಫಿಶಾ, ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಪಿಎಚ್‌ಡಿ ವಿದ್ಯಾರ್ಥಿ ಮೀರನ್ ಹೈದರ್ ಮತ್ತು ಜಾಮಿಯಾ ಸಮನ್ವಯ ಸಮಿತಿ ಮಾಧ್ಯಮ ಸಂಯೋಜಕ ಸಫೂರಾ ಹಾಗೂ ಇತರರು ಇದ್ದಾರೆ.

ಯೆಚೂರಿ, ಯೋಗೇಂದ್ರ ಆರೋಪಿಗಳಲ್ಲ: ಪೊಲೀಸರ ಸ್ಪಷ್ಟನೆಯೆಚೂರಿ, ಯೋಗೇಂದ್ರ ಆರೋಪಿಗಳಲ್ಲ: ಪೊಲೀಸರ ಸ್ಪಷ್ಟನೆ

ಭಯೋತ್ಪಾದನಾ ಕೃತ್ಯದ ವ್ಯಾಖ್ಯಾನ

ಭಯೋತ್ಪಾದನಾ ಕೃತ್ಯದ ವ್ಯಾಖ್ಯಾನ

50ಕ್ಕೂ ಹೆಚ್ಚು ಜನರ ಸಾವು ಹಾಗೂ 500ಕ್ಕೂ ಅಧಿಕ ಸಾರ್ವಜನಿಕರಿಗೆ ಗಾಯವಾಗಲು ಕಾರಣವಾಗಿರುವುದರ ಜತೆಗೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಬೆಂಕಿ ಇಡುವ ಹಾಗೂ ಇತರೆ ಮಾರ್ಗಗಳಿಂದ ಭಾರಿ ಪ್ರಮಾಣದಲ್ಲಿ ಹಾನಿ ಮಾಡಿರುವುದು ಸಹ ಸ್ಪಷ್ಟವಾಗಿ ಭಯೋತ್ಪಾದನಾ ಕೃತ್ಯದ ವ್ಯಾಖ್ಯಾನದಡಿ ಬರುತ್ತದೆ. ಸಮುದಾಯದ ಜೀವನಕ್ಕೆ ಅತ್ಯಗತ್ಯವಾದ ಸರಕು ಹಾಗೂ ಸೇವೆಗಳ ಪೂರೈಕೆಗೆ ಅಡ್ಡಿಯುಂಟು ಮಾಡಿರುವುದು ಭಯೋತ್ಪಾದನಾ ಕೃತ್ಯದ ವ್ಯಾಪ್ತಿಗೆ ಒಳಪಡುತ್ತದೆ ಎಂದು ವಿವರಿಸಿದೆ.

Recommended Video

Narendra Modi ಇಂದು ಹೊಸ 100 ರುಪಾಯಿಯ ನಾಣ್ಯವನ್ನು ಪರಿಚಯಿಸಿದರು| Oneindia Kannada
ಸ್ಥಳೀಯ ನಿವಾಸಿಗಳಿಗೆ ಆಗಿರುವ ಕಷ್ಟ ನಷ್ಟ

ಸ್ಥಳೀಯ ನಿವಾಸಿಗಳಿಗೆ ಆಗಿರುವ ಕಷ್ಟ ನಷ್ಟ

ಸಿಎಎ ವಿರೋಧಿ ಪ್ರತಿಭಟನಾಕಾರರಿಂದಾಗಿ ಸ್ಥಳೀಯ ನಿವಾಸಿಗಳು ತಮ್ಮ ವ್ಯಾಪಾರ ಚಟುವಟಿಕೆ ನಡೆಸಲು ಆಗುತ್ತಿರಲಿಲ್ಲ. ಮಕ್ಕಳಿಗೆ ಶಾಲೆಗೆ ಹೋಗುವುದು ಕಷ್ಟವಾಗುತ್ತಿತ್ತು. ಮುಸ್ಲಿಮರು ಅಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದರು. ಆಂಬುಲೆನ್ಸ್‌ಗಳಿಗೂ ಅಲ್ಲಿಗೆ ಪ್ರವೇಶಿಸಲು ಅವಕಾಶ ನೀಡುತ್ತಿರಲಿಲ್ಲ. ಎರಡು ಮೂರು ತಿಂಗಳವರೆಗೆ ಮುಸ್ಲಿಮರು ಅಲ್ಲಿನ ರಸ್ತೆಗಳನ್ನು ತಡೆದಿದ್ದರು. ಸ್ಥಳೀಯರಿಂದ ಬಂದ ಕರೆಗಳು ಹಾಗೂ ಫೇಸ್‌ಬುಕ್ ಪೋಸ್ಟ್‌ಗಳನ್ನು ನೋಡಿದಾಗ ರಸ್ತೆಗಳನ್ನು ಅಡ್ಡಿಪಡಿಸಿದ್ದರಿಂದ ಸ್ಥಳೀಯರು ಕಷ್ಟಪಡುತ್ತಿದ್ದಾರೆ ಎಂಬುದನ್ನು ತಿಳಿದು ಮೌಜ್ಪುರ ಚೌಕ್‌ಗೆ ಭೇಟಿ ನೀಡಿದ್ದಾಗಿ ತಿಳಿಸಿದ್ದಾರೆ. ಫೆಬ್ರವರಿ 23ರಂದು ಅಲ್ಲಿ ಒಂದು ಗಂಟೆ ಮಾತ್ರ ಇದ್ದೆ ಎಂದು ಅವರು ತಿಳಿಸಿದ್ದಾರೆ. ಶರ್ಮಾ ತಮ್ಮ ಹೇಳಿಕೆಯಲ್ಲಿ, ತಾವು ಅಲ್ಲಿ ಭಾಷಣ ಮಾಡಿರಲಿಲ್ಲ. ಮೂರು ದಿನದೊಳಗೆ ರಸ್ತೆಯನ್ನು ತೆರವುಗೊಳಿಸುವಂತೆ ಪೊಲೀಸರಿಗೆ ಸೂಚಿಸಿದ್ದೆ ಎಂದು ಪದೇ ಪದೇ ಹೇಳಿರುವುದನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

English summary
Delhi riots: A body of former civil servants has invited six experts, including four retired Supreme Court and high court judges, to conduct an independent probe into the Northeast Delhi riots.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X