ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮಗೆ ಕೋವ್ಯಾಕ್ಸಿನ್ ಬೇಡ; ಲಸಿಕೆ ಪಡೆಯಲು ದೆಹಲಿ ವೈದ್ಯರ ನಿರಾಕರಣೆ

|
Google Oneindia Kannada News

ನವದೆಹಲಿ, ಜನವರಿ 16: ದೇಶಾದ್ಯಂತ ಶನಿವಾರ ಲಸಿಕೆ ಅಭಿಯಾನ ಶುರುವಾಗಿದ್ದು, ಮೊದಲ ಹಂತದಲ್ಲಿ ಎಲ್ಲಾ ರಾಜ್ಯಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ನೀಡಲಾಗುತ್ತಿದೆ.

Recommended Video

ಮಂಡ್ಯ: 8 ಲಸಿಕ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ವಿತರಣೆ, ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ | Oneindia Kannada

ಆದರೆ ದೆಹಲಿಯ ಆಸ್ಪತ್ರೆಯೊಂದರ ವೈದ್ಯರು ಕೊರೊನಾ ಲಸಿಕೆ ಸ್ವೀಕರಿಸಲು ನಿರಾಕರಿಸಿದ ಸಂಗತಿ ನಡೆದಿದೆ. ನಮಗೆ ಕೋವ್ಯಾಕ್ಸಿನ್ ಲಸಿಕೆ ಬೇಡ, ಕೋವಿಶೀಲ್ಡ್ ನೀಡಿ ಎಂದು ವೈದ್ಯರು ಮನವಿ ಮಾಡಿದ್ದಾರೆ.

"ಲಸಿಕೆ ಮೇಲೆ ಅಷ್ಟು ನಂಬಿಕೆಯಿದ್ದರೆ ನೀವೆಲ್ಲಾ ಇನ್ನೂ ತೆಗೆದುಕೊಂಡಿಲ್ಲ ಏಕೆ?"

ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರು ತಾವು ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಳ್ಳುವುದಿಲ್ಲ ಎಂದು ನಿರಾಕರಿಸಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿಗೆ ಪತ್ರ ಬರೆದಿರುವ ವೈದ್ಯರು, ನಾವು ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಳ್ಳುವುದಿಲ್ಲ. ಅದರ ಬದಲು ಎಲ್ಲಾ ಹಂತದ ಪ್ರಯೋಗಗಳಿಂದ ದೃಢೀಕರಣಗೊಂಡಿರುವ ಸೆರಂ ಇನ್ ಸ್ಟಿಟ್ಯೂಟ್ ನ ಕೋವಿಶೀಲ್ಡ್ ಲಸಿಕೆ ನೀಡಿ ಎಂದು ಕೇಳಿಕೊಂಡಿದ್ದಾರೆ.

Delhi RML Hospital Doctors Rejected Covaxin And Demanded Covishield

ಇನ್ನೂ ಪ್ರಾಯೋಗಿಕ ಹಂತದಲ್ಲಿರುವ ಕೋವ್ಯಾಕ್ಸಿನ್ ಬಗ್ಗೆ ಆಸ್ಪತ್ರೆಯ ವೈದ್ಯರಿಗೆ ಆತಂಕವಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಲು ಮುಂದಾಗಿಲ್ಲ. ಈ ಲಸಿಕೆ ಬದಲು ಎಲ್ಲಾ ಪರೀಕ್ಷಾ ಹಂತಗಳನ್ನು ಪೂರೈಸಿ ಅನುಮತಿ ಪಡೆದಿರುವ ಕೋವಿಶೀಲ್ಡ್ ಲಸಿಕೆ ನೀಡಿ ಎಂದು ಕೋರಿಕೊಂಡಿದ್ದಾರೆ.

ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಎ.ಕೆ.ಸಿಂಗ್ ರಾಣಾ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ದೆಹಲಿಯಲ್ಲಿ ಶನಿವಾರ 81 ಸ್ಥಳಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಯುತ್ತಿದ್ದು, ದೆಹಲಿಯ ಏಮ್ಸ್, ಸಫ್ದರ್ಜುಂಗ್ ಆಸ್ಪತ್ರೆ, ಆರ್ ಎಂಎಲ್ ಆಸ್ಪತ್ರೆ, ಕಲಾವತಿ ಸರಣ್ ಮಕ್ಕಳ ಆಸ್ಪತ್ರೆ ಹಾಗೂ ಎರಡು ಇಎಸ್ ಐ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ.

English summary
The resident doctors of Delhi’s premier Ram Manohar Lohia (RML) Hospital have wrote a letter to the hospital superintendent saying they do not want to take the Bharat Biotech vaccine Covaxin
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X