• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್‌ಗೆ ಕೊರೊನಾ ಇಲ್ಲ

|

ದೆಹಲಿ, ಜೂನ್ 16: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್‌ ಅವರ ಕೊರೊನಾ ವೈರಸ್ ಪರೀಕ್ಷೆಯ ವರದಿ ಬಂದಿದ್ದು, ಸೋಂಕು ತಗುಲಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

   ದೇಶದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳಿಗೆ ಕರೆಕೊಟ್ಟ ಮೋದಿ | Oneindia Kannada

   ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಸತ್ಯೇಂದರ್ ಜೈನ್‌ ಅವರು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಶಂಕೆಯಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ, ಫಲಿತಾಂಶ ಹೊರಬಿದ್ದಿದ್ದು ಸೋಂಕು ಇಲ್ಲ ಎಂದು ಎಎನ್ಐ ವರದಿ ಮಾಡಿದೆ. ಜೈನ್ ಅವರಿಗೆ ಜ್ವರ ಮಾತ್ರವಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

   ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್‌ ಆಸ್ಪತ್ರೆಗೆ ದಾಖಲು

   ಜ್ವರದ ಜೊತೆ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು ಸ್ವತಃ ಸಚಿವರೇ ಟ್ವೀಟ್ ಮಾಡಿದ್ದರು. 'ಅತಿಯಾದ ಜ್ವರವಿದ್ದ ಕಾರಣ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಆಕ್ಸಿಜನ್ ಪ್ರಮಾಣ ಏರಿಳಿತವಾಗುತ್ತಿತ್ತು. ಹೀಗಾಗಿ ರಾತ್ರಿಯೇ ಆಸ್ಪತ್ರೆಗೆ ಬಂದು ದಾಖಲಾಗಿದ್ದೇನೆ' ಎಂದು ತಿಳಿಸಿದ್ದರು.

   ಕಳೆದ ವಾರವಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆ ಮನೆಯಲ್ಲಿಯೇ ಐಸೋಲೇಟ್ ಆಗಿದ್ದರು. ಬಳಿಕ, ಕೊವಿಡ್ ಪರೀಕ್ಷೆಯಲ್ಲಿ ಫಲಿತಾಂಶ ನೆಗಿಟಿವ್ ಬಂದಿತ್ತು.

   ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ದೆಹಲಿ ಮೂರನೇ ಸ್ಥಾನದಲ್ಲಿದೆ. 42829 ಜನರಿಗೆ ರಾಷ್ಟ್ರ ರಾಜಧಾನಿಯಲ್ಲಿ ಸೋಂಕು ದೃಢವಾಗಿದೆ. 1400 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

   English summary
   Delhi's Health Minister Satyendar Jain tests negative for COVID19. His condition is stable though he still has fever.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X