ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ ಆದೇಶದವರೆಗೂ ದೆಹಲಿಯ ಶಾಲೆಗಳು ಮುಚ್ಚಿರಲಿವೆ: ಸಿಸೋಡಿಯಾ

|
Google Oneindia Kannada News

ನವದೆಹಲಿ, ಅಕ್ಟೋಬರ್ 28: ಕೇಂದ್ರ ಸರ್ಕಾರದ ಮುಂದಿನ ಆದೇಶದವರೆಗೂ ಶಾಲೆಗಳು ಮುಚ್ಚಿರಲಿವೆ ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

ಲಾಕ್‌ಡೌನ್ ಸಡಿಲಗೊಳಿಸುವ ಕ್ರಮಗ ಪೈಕಿ ಐದನೇ ಹಂತದಲ್ಲಿ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ. ಸೆಪ್ಟೆಂಬರ್ 21ರಿಂದಲೇ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಪಾಠ ಮಾಡಬಹುದು ಎಂದು ಕೇಂದ್ರ ಸರ್ಕಾರವು ಮಾರ್ಗಸೂಚಿಯಲ್ಲಿ ತಿಳಿಸಿತ್ತು.

ಕರ್ನೂಲ್‌ನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು,4 ಶಾಲೆಗಳು ಬಂದ್ ಕರ್ನೂಲ್‌ನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು,4 ಶಾಲೆಗಳು ಬಂದ್

ಹಲವು ರಾಜ್ಯಗಳಲ್ಲಿ ಶಾಲೆಗಳು ಪುನರಾರಂಭಗೊಳ್ಳಲಿವೆ. ಅಕ್ಟೋಬರ್ 31ವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ದೆಹಲಿ ಸರ್ಕಾರ ಈ ಹಿಂದೆ ತಿಳಿಸಿತ್ತು. ಶಾಲೆ ತೆರೆಯುವ ಬಗ್ಗೆ ಪಾಲಕರಿಗೂ ಸಮ್ಮತಿ ಇಲ್ಲ ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

Delhi Schools To Remain Shut Till Further Orders

ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮಾರ್ಚ್ 16ರಿಂದಲೇ ದೇಶಾದ್ಯಂತ ಶಾಲೆಗಳು ಹಾಗೂ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ. ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್ ಜಾರಿ ಮಾಡಲಾಗಿತ್ತು.

ಬಳಿಕ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ತರಗತಿಗಳನ್ನು ನಡೆಸುತ್ತಿವೆ ಹಾಗೂ ಮುಖ್ಯ ಪರೀಕ್ಷೆಗಳನ್ನಷ್ಟೇ ನಡೆಸಲಾಗಿದೆ. ಕೆಲವು ರಾಜ್ಯಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ.

ಶಾಲೆಗಳನ್ನು ತೆರೆಯುವ ಬಗ್ಗೆ ಪೋಷಕರಿಂದ ಹಲವು ಅಭಿಪ್ರಾಯಗಳು ವ್ಯಕ್ತವಾಗಿತ್ತು. ಮಕ್ಕಳ ಸುರಕ್ಷತೆ ಕುರಿತು ಪ್ರಶ್ನಿಸಲಾಗುತ್ತಿದೆ. ಶಾಲೆ ತೆರೆದಿರುವ ಕಡೆ ಮಕ್ಕಳಲ್ಲಿ ಕೊವಿಡ್ 19 ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

ಹಾಗಾಗಿ ನಾವು ದೆಹಲಿಯಲ್ಲಿ ಶಾಲೆಯನ್ನು ತೆರೆಯದಿರಲು ನಿರ್ಧರಿಸಿದ್ದೇವೆ, ಮುಂದಿನ ಆದೇಶದವರೆಗೂ ಶಾಲೆಗಳು ಮುಚ್ಚಿರಲಿವೆ ಎಂದು ತಿಳಿಸಿದ್ದಾರೆ.

Recommended Video

Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

English summary
All schools in Delhi will remain closed till further orders in view of the COVID-19 situation, Deputy Chief Minister Manish Sisodia, who also holds the education portfolio, said today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X