ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ: ಮುಂದಿನ 2 ದಿನಗಳಲ್ಲಿ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಲಿದೆ ಉಷ್ಣಾಂಶ, ಮಳೆ ಸಾಧ್ಯತೆ

|
Google Oneindia Kannada News

ನವದೆಹಲಿ, ಮಾರ್ಚ್ 06: ಈ ಬಾರಿ ಬೇಸಿಗೆ ಕಳೆಯುವುದು ಅಷ್ಟು ಸುಲಭವಿಲ್ಲ, ಯಾಕೆಂದರೆ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಭಾರಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗೆಯೇ ಇನ್ನು ಕೆಲವೇ ದಿನಗಳಲ್ಲಿ ದೆಹಲಿಯಲ್ಲಿ ಉಷ್ಣಾಂಶ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಮಾರ್ಚ್ 7 ರಂದು ಸಣ್ಣ ಪ್ರಮಾಣದ ಮಳೆಯೂ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ಗರಿಷ್ಠ ಉಷ್ಣಾಂಶ 31.6 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಸೋಮವಾರದ ವೇಳೆಗೆ ಗರಿಷ್ಠ ಉಷ್ಣಾಂಶ 34 ರಿಂದ 35 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದು ಅಂದಾಜಿಸಲಾಗಿದೆ.

ಈ ಬಾರಿಯ 'ಉರಿ ಬೇಸಿಗೆ' ಕುರಿತು ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ ಈ ಬಾರಿಯ 'ಉರಿ ಬೇಸಿಗೆ' ಕುರಿತು ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಮುಂದಿನ ಕೆಲ ದಿನಗಳಲ್ಲಿ ಕನಿಷ್ಠ ಉಷ್ಣಾಂಶ ಕೂಡ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ. ದೆಹಲಿ, ಚಂಡೀಗಢ, ಉತ್ತರ ಪ್ರದೇಶ ಮತ್ತು ಹರ್ಯಾಣದಲ್ಲಿ ನಿರ್ದಿಷ್ಟ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಸೃಷ್ಟಿಯಾಗಲಿದೆ. ಮಾರ್ಚ್ ಅಂತ್ಯದ ವೇಳೆಗೆ ಶಾಖದ ಅಲೆಗಳು ಹೆಚ್ಚಾಗಲಿವೆ. ಸೆಕೆಯನ್ನು ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಲಾಗಿದೆ.

Delhi Temperature May Rise By 4 Degrees Celsius In Next Few Days

ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಬೆಳಗ್ಗೆ ಬಿಸಿಲು ಆರಂಭವಾಗಿ ಸಂಜೆ ಬಿಸಿಲು ಕಡಿಮೆಯಾಗಿ ಸ್ವಲ್ಪ ಸಮಯಗಳವರೆಗೆ ಉಷ್ಣಾಂಶವಿರುತ್ತಿತ್ತು. ಆದರೆ ಈ ಬೇಸಿಗೆಯಲ್ಲಿ ಬೆಳಗ್ಗೆ ಹಾಗೂ ಸಂಜೆ ಎರಡೂ ಸಮಯದಲ್ಲೂ ಸೆಕೆ ನಿಮ್ಮನ್ನು ಕಾಡಲಿದೆ.

English summary
The maximum temperature is likely to rise by three to four degrees Celsius in Delhi in the next few days, the India Meteorological Department (IMD) said on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X