ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲೇ ಮೊದಲು; ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆ

|
Google Oneindia Kannada News

ನವದೆಹಲಿ, ಜೂನ್ 29 : " ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆಗೆ ಸಹಾಯಕವಾಗಲು ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತದೆ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ರಾಜ್ಯಗಳಲ್ಲಿ ದೆಹಲಿಯೂ ಸೇರಿದೆ.

ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, "ದೇಶದಲ್ಲಿಯೇ ಪ್ಲಾಸ್ಮಾ ಥೆರಪಿ ಪ್ರಯೋಗ ಮಾಡಿದ ಮೊದಲ ರಾಜ್ಯ ದೆಹಲಿ ಆಗಿದೆ. 29 ಜನರ ಮೇಲೆ ಪ್ರಯೋಗ ಮಾಡಲಾಗಿದ್ದು, ಉತ್ತಮವಾಗಿ ಫಲಿತಾಂಶ ಬಂದಿದೆ" ಎಂದರು.

ಕರ್ನಾಟಕದಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿ: ಹುಬ್ಬಳ್ಳಿ ಕಿಮ್ಸ್‌ಗೆ ಶ್ಲಾಘನೆ ಕರ್ನಾಟಕದಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿ: ಹುಬ್ಬಳ್ಳಿ ಕಿಮ್ಸ್‌ಗೆ ಶ್ಲಾಘನೆ

"ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗೆ ಸಹಾಯಕವಾಗುವಂತೆ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತದೆ. ಯಾವ ರೋಗಿಗೆ ಪ್ಲಾಸ್ಮಾ ಥೆರಪಿ ಅಗತ್ಯವಿದೆ ಎಂದು ವೈದ್ಯರು ಶಿಫಾರಸು ಮಾಡಬೇಕು" ಎಂದು ಹೇಳಿದರು.

ಕೊರೊನಾ ವಿರುದ್ಧದ ಪ್ಲಾಸ್ಮಾ ಚಿಕಿತ್ಸೆಯನ್ನು ಕೈಬಿಟ್ಟ ಕರ್ನಾಟಕ ಕೊರೊನಾ ವಿರುದ್ಧದ ಪ್ಲಾಸ್ಮಾ ಚಿಕಿತ್ಸೆಯನ್ನು ಕೈಬಿಟ್ಟ ಕರ್ನಾಟಕ

Delhi The First State To Set Up Plasma Bank To Help COVID Patients

"ಕೇಂದ್ರ ಸರ್ಕಾರ ದೆಹಲಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಥೆರಪಿ ಮೂಲಕ ಚಿಕಿತ್ಸೆ ನೀಡಲು ಒಪ್ಪಿಗೆ ನೀಡಿದೆ. ಪ್ಲಾಸ್ಮಾ ಥೆರಪಿ ಆದ ರೋಗಿಗಳ ಉಸಿರಾಟದ ಸಮಸ್ಯೆ ನಿವಾರಣೆಯಾಗಿದೆ" ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.

ಪ್ಲಾಸ್ಮಾ ಥೆರಪಿ ನಿಲ್ಲಿಸಲ್ಲ: ಕೇಂದ್ರದ ಎಚ್ಚರಿಕೆಗೆ ಕಿವಿಕೊಡದ ಕೇಜ್ರಿವಾಲ್ಪ್ಲಾಸ್ಮಾ ಥೆರಪಿ ನಿಲ್ಲಿಸಲ್ಲ: ಕೇಂದ್ರದ ಎಚ್ಚರಿಕೆಗೆ ಕಿವಿಕೊಡದ ಕೇಜ್ರಿವಾಲ್

"ದೇಶದಲ್ಲಿಯೇ ದೆಹಲಿಯಲ್ಲಿ ಮೊದಲು ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದೆ. ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದ ವ್ಯಕ್ತಿಗಳು ಪ್ಲಾಸ್ಮಾ ನೀಡಬಹುದಾಗಿದೆ. ವೈದ್ಯರ ಶಿಫಾರಸಿನ ಅನ್ವಯ ಬೇರೆ ರೋಗಿಗೆ ಪ್ಲಾಸ್ಮಾ ಥೆರಪಿ ಮಾಡಲಾಗುತ್ತದೆ" ಎಂದರು.

"ಇನ್‌ಸ್ಟಿಟ್ಯೂಟ್‌ ಆಫ್‌ ಲಿವರ್‌ ಆಂಡ್‌ ಬಿಲಿಯರಿ ಸೈನ್ಸಸ್‌ನಲ್ಲಿ ಪ್ಲಾಸ್ಮಾ ಬ್ಯಾಂಕ್ ಇರಲಿದೆ. ಎರಡು ದಿನದಲ್ಲಿ ಈ ಬ್ಯಾಂಕ್ ಕಾರ್ಯಾರಂಭ ಮಾಡಲಿದೆ. ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರು ತಾವಾಗಿಯೇ ಬಂದು ಪ್ಲಾಸ್ಮಾ ನೀಡಬಹುದಾಗಿದೆ" ಎಂದು ಸಿಎಂ ಸ್ಪಷ್ಟಪಡಿಸಿದರು.

"ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರು ಪ್ಲಾಸ್ಮಾ ನೀಡಿದರೆ ಉಳಿದವರೂ ಗುಣಮುಖರಾಗಲು ಸಹಾಯಕವಾಗುತ್ತದೆ. ಪ್ಲಾಸ್ಮಾ ನೀಡುವಂತೆ ಇದು ನನ್ನ ಮನವಿಯಾಗಿದೆ" ಎಂದು ಅರವಿಂದ ಕೇಜ್ರಿವಾಲ್ ಹೇಳಿದರು.

English summary
Delhi Chief Minister Arvind Kejriwal said that government will set up plasma bank to fight against Coronavirus. Delhi is the 1st state to set up bank. People who have recovered from COVID can to donate plasma.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X