ದೆಹಲಿ ಗಲಭೆ; 167 ಎಫ್‌ಐಆರ್, 885 ಜನರ ಬಂಧನ
ನವದೆಹಲಿ, ಮಾರ್ಚ್ 01 : ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 885 ಜನರನ್ನು ಬಂಧಿಸಲಾಗಿದೆ. 167 ಎಫ್‌ಐಆರ್‌ಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧ ಹೋರಾಟಗಾರರ ನಡುವೆ ಆರಂಭವಾದ ಘರ್ಷಣೆ ನಂತರ ಹಿಂಸಾಚಾರಕ್ಕೆ ತಿರುಗಿತ್ತು. ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ 42 ಜನರು ಮೃತಪಟ್ಟಿದ್ದರು.
ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 167 ಎಫ್‌ಐಆರ್ ದಾಖಲು ಮಾಡಲಾಗಿದೆ. 885 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಶಸ್ತ್ರಾಸ್ತ್ರ ಕಾಯ್ದೆಯಡಿ 36 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ಗಳಲ್ಲಿ ಗಲಭೆಗೆ ಪ್ರಚೋದನೆ ನೀಡುವಂತೆ ಪೋಸ್ಟ್ ಹಾಕಿದ ಕಾರಣಕ್ಕೆ 13 ಪ್ರಕರಣಗಳನ್ನು ದಾಖಲಿಸಲಾಗಿದೆ.
ಗಲಭೆ ಪ್ರಚೋದನೆ ನೀಡುವಂತೆ ಪೋಸ್ಟ್ ಹಾಕಿದ್ದ ವೆಬ್ ಲಿಂಕ್‌ಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಗಲಭೆಯಲ್ಲಿ 42 ಜನರು ಮೃತಪಟ್ಟಿದ್ದಾರೆ. 250ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.












Click it and Unblock the Notifications