ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಹಿಂಸಾಚಾರದ ಸಂದರ್ಭದಲ್ಲಿ ಪತ್ರಕರ್ತನಿಗೆ ಗುಂಡೇಟು

|
Google Oneindia Kannada News

ನವದೆಹಲಿ, ಫೆಬ್ರವರಿ.25: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಪರಿಸ್ಥಿತಿ ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿದೆ. ದೆಹಲಿ ಈಶಾನ್ಯ ಭಾಗದ ಮೌಜ್ ಪುರ್ ನಲ್ಲಿ ವರದಿಗೆ ತೆರಳಿದ ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಾಯಗೊಂಡಿರುವ ಪತ್ರಕರ್ತನನ್ನು ದೆಹಲಿಯ ಜಿಟಿಬಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಂದೆಡೆ ಕರ್ದಾಂಪುರಿ ಪ್ರದೇಶದಲ್ಲಿ ಮತ್ತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂರು ಪ್ಯಾರಾ ಮಿಲಿಟರಿ ವಾಹನಗಳು ದೌಡಾಯಿಸಿದವು.

ದೆಹಲಿ ಹಿಂಸಾಚಾರದ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?ದೆಹಲಿ ಹಿಂಸಾಚಾರದ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ಭಜನ್ ಪುರದಲ್ಲೂ ಕೂಡಾ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಮತ್ತೆ ಕಲ್ಲುತೂರಾಟ ನಡೆದಿದೆ. ಕರವಾಲ ನಗರಕ್ಕೆ ತೆರಳಲು ಎರಡೂ ಮಾರ್ಗಗಳಲ್ಲಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Delhi Violence: A Journlist From Private Channel Shot At Maujpur - Reports

ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಅರವಿಂದ್ ಕೇಜ್ರಿವಾಲ್:

ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗಿನ ತುರ್ತುಸಭೆ ಬಳಿಕ ಸಿಎಂ ಅರವಿಂದ್ ಕೇಜ್ರಿವಾಲ್ ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

Delhi Violence: A Journlist From Private Channel Shot At Maujpur - Reports

ಇನ್ನು, ಇದುವರೆಗೂ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ರತನ್ ಲಾಲ್ ಸೇರಿದಂತೆ 7 ಮಂದಿ ಪ್ರಾಣ ಬಿಟ್ಟಿದ್ದಾರೆ. 10 ಮಂದಿ ಪೊಲೀಸರು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

English summary
Delhi Violence: A Journlist From Private Channel Shot At Maujpur, Say's Reports.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X