ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಹಿಂಸಾಚಾರ; ಸಿಬಿಎಸ್ಇ ಪರೀಕ್ಷೆ ಮುಂದೂಡಿಕೆ

|
Google Oneindia Kannada News

ನವದೆಹಲಿ, ಫೆಬ್ರವರಿ 25 : ನವದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ, ವಿರೋಧ ಹೋರಾಟಗಾರರ ನಡುವೆ ಘರ್ಷಣೆ ನಡೆಯುತ್ತಿದೆ. ಇದುವರೆಗೂ ಪೊಲೀಸರು ಸೇರಿ 13 ಜನರು ಮೃತಪಟ್ಟಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಘರ್ಷಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಿಬಿಎಸ್‌ಇ ಫೆಬ್ರವರಿ 26ರಂದು ನಡೆಯಬೇಕಿದ್ದ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.

ದೆಹಲಿ ಹಿಂಸಾಚಾರಕ್ಕೆ 11 ಬಲಿ, 70 ಮಂದಿಗೆ ಗುಂಡೇಟುದೆಹಲಿ ಹಿಂಸಾಚಾರಕ್ಕೆ 11 ಬಲಿ, 70 ಮಂದಿಗೆ ಗುಂಡೇಟು

ದೆಹಲಿಯ ಶಿಕ್ಷಣ ಇಲಾಖೆ ಮಾಡಿದ ಮನವಿಯ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ದೆಹಲಿ ಹಿಂಸಾಚಾರದ ಸಂದರ್ಭದಲ್ಲಿ ಪತ್ರಕರ್ತನಿಗೆ ಗುಂಡೇಟು ದೆಹಲಿ ಹಿಂಸಾಚಾರದ ಸಂದರ್ಭದಲ್ಲಿ ಪತ್ರಕರ್ತನಿಗೆ ಗುಂಡೇಟು

Delhi Violence

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಕುರಿತು ಹೇಳಿಕೆ ನೀಡಿದ್ದಾರೆ. "ಗಲಭೆ ಪೀಡಿತ ಪ್ರದೇಶದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ" ಎಂದು ಹೇಳಿದ್ದಾರೆ.

ಈಶಾನ್ಯ ದೆಹಲಿಯ ಹಲವು ಪ್ರದೇಶಗಳಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಿಂಸಾಚಾರದಲ್ಲಿ ಇದುವರೆಗೂ 13 ಜನರು ಮೃತಪಟ್ಟಿದ್ದಾರೆ. ಗಲಭೆಯನ್ನು ಹತೋಟಿಗೆ ತರಲು ಕಂಡಲ್ಲಿ ಗುಂಡು ಆದೇಶ ಹೊರಡಿಸಲಾಗಿದೆ.

ದೆಹಲಿ ಹಿಂಸಾಚಾರದ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?ದೆಹಲಿ ಹಿಂಸಾಚಾರದ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಪರಿಸ್ಥಿತಿ ಬಗ್ಗೆ ಸಭೆ ನಡೆಸಿದ್ದಾರೆ. ಹಿಂಸಾಚಾರವನ್ನು ಹತೋಟಿಗೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ.

English summary
In a view of Delhi violence Central Board of Secondary Education (CBSE) postponed class 10 and 12 exams scheduled for February 26, 2020 in north east part of Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X