ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ; ಗುಪ್ತಚಾರಿ ಅಧಿಕಾರಿ ಕೊಲೆ, ಆಪ್ ಕಾರ್ಯಕರ್ತ ಬಂಧನ

|
Google Oneindia Kannada News

ನವದೆಹಲಿ, ಮಾರ್ಚ್ 5: ದೆಹಲಿ ಹಿಂಸಾಚಾರದಲ್ಲಿ ಕೊಲೆಯಾಗಿದ್ದ ಗುಪ್ತಚರ ಅಧಿಕಾರಿ ಅಂಕಿತ್ ಶರ್ಮಾ ಕೊಲೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿಯ ದೆಹಲಿ ಕೌನ್ಸಿಲರ್ ತಾಹೀರ್ ಹುಸೇನ್‌ನ್ನು ದೆಹಲಿ ಪೊಲೀಸರು ಗುರುವಾರ ಮಧ್ಯಾಹ್ನ ಬಂಧಿಸಿದ್ದಾರೆ.

ತಾಹೀರ್ ಹುಸೇನ್‌ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಜಾಗೊಂಡಿದ್ದರಿಂದ ಅವರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಆಮ್‌ ಆದ್ಮಿ ಪಕ್ಷದ ಸದಸ್ಯ ಸ್ಥಾನದಿಂದ ಅವರನ್ನು ವಜಾ ಮಾಡಲಾಗಿದೆ.

ನಾಪತ್ತೆಯಾಗಿದ್ದ ಐಬಿ ಅಧಿಕಾರಿ ಮೃತದೇಹ ಚರಂಡಿಯಲ್ಲಿ ಪತ್ತೆನಾಪತ್ತೆಯಾಗಿದ್ದ ಐಬಿ ಅಧಿಕಾರಿ ಮೃತದೇಹ ಚರಂಡಿಯಲ್ಲಿ ಪತ್ತೆ

ಫೆ 25 ರಂದು ಸಂಜೆ ನಾಪತ್ತೆಯಾಗಿದ್ದ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಅವರ ದೇಹ ಚಾಂದ್ ಬಾಗ್‌ನ ಜಫ್ರಾಬಾದ್‌ನಲ್ಲಿನ ಚರಂಡಿಯಲ್ಲಿ ಫೆ 27 ಪತ್ತೆಯಾಗಿತ್ತು.

Delhi Violence IB Officer Accused Tahir Husen Arrest

ಈಶಾನ್ಯ ದೆಹಲಿಯ ಖಜೂರಿ ಖಾಸ್ ಪ್ರದೇಶದ ನಿವಾಸಿಯಾಗಿದ್ದ ಅಂಕಿತ್ ಶರ್ಮಾ, ಅವರ ದೇಹ ಅತ್ಯಂತ ಗಲಭೆ ಪೀಡಿತ ಪ್ರದೇಶಗಳಲ್ಲಿ ಒಂದಾದ ಜಫ್ರಾಬಾದ್‌ನಲ್ಲಿ ಸಿಕ್ಕಿತ್ತು. ಅಂಕಿತ್ ಸಾವಿಗೆ ಎಎಪಿ ಮುಖಂಡ ತಾಹೀರ್ ಹುಸೇನ್ ಕಾರಣ ಎಂದು ಅವರ ತಂದೆ ರವೀಂದರ್ ಶರ್ಮಾ ಆರೋಪಿಸಿದ್ದರು. ಅಂಕಿತ್ ಶರ್ಮಾ ಅವರನ್ನು 400ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಕ್ರೂರವಾಗಿ ಇರಿದು ಕೊಲ್ಲಲಾಗಿತ್ತು ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿತ್ತು.

English summary
Delhi Violence IB Officer Accused Tahir Husen Arrested by Delhi police. AAP worker Tahir Husen sent to JC by Delhi court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X