ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಫೈರಿಂಗ್ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

|
Google Oneindia Kannada News

ನವದೆಹಲಿ, ಫೆಬ್ರವರಿ.25: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಮತ್ತು ಪರವಾಗಿ ನಡೆಯುತ್ತಿರುವ ಸಂಘರ್ಷದ ನಡುವೆ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ.24ರಂದು ಸಿಎಎ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಕಲ್ಲುತೂರಾಟ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಕೆಂಪು ಟೀ-ಶರ್ಟ್ ತೊಟ್ಟುಕೊಂಡಿದ್ದ ಶಾರೂಕ್ ಎಂಬ ವ್ಯಕ್ತಿ ಗಾಳಿಯಲ್ಲಿ ಎಂಟು ಸುತ್ತು ಫೈರಿಂಗ್ ನಡೆಸಿದ್ದನು.

ದೆಹಲಿಯ ಹಿಂಸಾಚಾರ ಫೋಟೋ ಜರ್ನಲಿಸ್ಟ್ ಕಂಡಂತೆದೆಹಲಿಯ ಹಿಂಸಾಚಾರ ಫೋಟೋ ಜರ್ನಲಿಸ್ಟ್ ಕಂಡಂತೆ

ಕಳೆದ ಎರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಇದುವರೆಗೂ ಒಬ್ಬ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ 7 ಮಂದಿ ಪ್ರಾಣ ಬಿಟ್ಟಿದ್ದಾರೆ. 10 ಮಂದಿ ಪೊಲೀಸರು ಸೇರಿದಂತೆ 76ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Delhi Violence: Police Detained A Man Who Opens Fire At Northeast Area

ಈಶಾನ್ಯ ದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ:

ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 35 ಕಂಪನಿಗಳ ಪ್ಯಾರಾ ಮಿಲಿಟರಿ ಫೋರ್ಸ್ ನ್ನು ಈಶಾನ್ಯ ಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ದೆಹಲಿ ಪೊಲೀಸರ ವಿಶೇಷ ಪಡೆ, ಕ್ರೈಂ ಬ್ರ್ಯಾಂಚ್ ಸಿಬ್ಬಂದಿ, ಆರ್ಥಿಕ ಅಪರಾಧ ಪಡೆಯನ್ನು ನಿಯೋಜಿಸಲಾಗಿದೆ. ಇಷ್ಟಲ್ಲೇ ನೆರೆ ರಾಜ್ಯಗಳ ಪೊಲೀಸರನ್ನು ಭದ್ರತೆಗಾಗಿ ದೆಹಲಿಗೆ ಕರೆಸಿಕೊಳ್ಳಲಾಗಿದೆ.

ಮಧ್ಯರಾತ್ರಿ ಹೊತ್ತಿ ಉರಿದ ದೇಶದ ರಾಜಧಾನಿ; ಕಿಚ್ಚು ಹಬ್ಬಿದ ವೃತ್ತಾಂತಮಧ್ಯರಾತ್ರಿ ಹೊತ್ತಿ ಉರಿದ ದೇಶದ ರಾಜಧಾನಿ; ಕಿಚ್ಚು ಹಬ್ಬಿದ ವೃತ್ತಾಂತ

ಮಂಗಳವಾರ ಮಧ್ಯಾಹ್ನದ ವೇಳೆಗೆ ಮೌಜ್ ಪುರ್ ಬಳಿಕ ಕಬೀರ್ ನಗರ್ ದಲ್ಲಿ ಮತ್ತೆ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದೆ. ಈ ಹಿನ್ನೆಲೆಯಲ್ಲಿ ಜಫ್ರಾಬಾದ್, ಮೌಜ್ ಪುರ್, ಬಾಬರ್ ಪುರ್, ಗೋಕುಲ್ ಪುರಿ, ಜೋಹ್ರಾ ಎನ್ ಕ್ಲಿವ್ ಮತ್ತು ಶಿವ ವಿಹಾರ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಸಿಆರ್ ಪಿಸಿ ಕಾಯ್ದೆಯಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

English summary
Delhi Violence: Police Detained A Man, Who Opens Fire At Northeast Area. Detained Person Shahrukh Identified As Anti-CAA Protester.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X