ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಹಿಂಸಾಚಾರ: ಮೂರು ದಿನಗಳ ನಂತರ ಪ್ರಧಾನಮಂತ್ರಿ ಮೋದಿ ಟ್ವೀಟ್

|
Google Oneindia Kannada News

ನವದೆಹಲಿ, ಫೆಬ್ರವರಿ.26: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಿಚ್ಚಿಗೆ ರಾಷ್ಟ್ರ ರಾಜಧಾನಿಯೇ ಹೊತ್ತಿ ಉರಿಯುತ್ತಿದೆ. ದೆಹಲಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಟ್ವೀಟ್ ಮಾಡಿದ್ದಾರೆ.

Recommended Video

Prime minister Narendra Modi appeal for peace and harmony | MODI | DELHI

ಶಾಂತಿ ಮತ್ತು ಸಾಮರಸ್ಯದ ಕೇಂದ್ರವಾಗಿರುವ ದೇಶದಲ್ಲಿ ಇಂಥ ಬೆಳವಣಿಗೆಗಳು ಉತ್ತಮವಲ್ಲ. ಪ್ರೀತಿಯ ಸಹೋದರ ಸಹೋದರಿಯರಲ್ಲಿ ನಾನು ಮನವಿ ಮಾಡಿಕೊಳ್ಳುವುದಿಷ್ಟೇ, ದೆಹಲಿಯಲ್ಲಿ ಶಾಂತಿ ಮರುಸ್ಥಾಪನೆಗೆ ಎಲ್ಲರೂ ಸಹಕರಿಸಬೇಕು ಎಂದು ಪ್ರಧಾನಿ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.

ಪ್ರಚೋದನಾತ್ಮಕ ಹೇಳಿಕೆ ನೀಡಿದ ನಾಯಕರ ವಿರುದ್ಧ ಎಫ್ಐಆರ್ಪ್ರಚೋದನಾತ್ಮಕ ಹೇಳಿಕೆ ನೀಡಿದ ನಾಯಕರ ವಿರುದ್ಧ ಎಫ್ಐಆರ್

ರಾಷ್ಟ್ರ ರಾಜಧಾನಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಆದಷ್ಟು ಬೇಗ ಪರಿಸ್ಥಿತಿಯನ್ನು ತಿಳಿಗೊಳಿಸುವಂತಾ ಪ್ರಯತ್ನ ನಡೆಯುತ್ತಿದೆ. ಅದೇ ನಿಟ್ಟಿನಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಕಾರ್ಯ ಪ್ರವೃತ್ತವಾಗಿವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Delhi Violence: Prime Minister Narendra Modi Appela To Peace And Harmony

ಗೃಹ ಸಚಿವಾಲಯದ ಮೇಲ್ವಿಚಾರಣೆ:

ದೆಹಲಿಯ ಈಶಾನ್ಯ ಭಾಗದಲ್ಲಿ ನಡೆದಿರುವ ಹಿಂಸಾಚಾರದಿಂದ ಈವರೆಗೂ 21 ಮಂದಿ ಪ್ರಾಣ ಬಿಟ್ಟಿದ್ದು, 190ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವಾಲಯ ತೀವ್ರ ಲಕ್ಷ್ಯ ವಹಿಸಿದೆ. ಈಗಾಗಲೇ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಸಿಆರ್ ಪಿಸಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಲ್ಕು ಕಡೆಗಳಲ್ಲಿ ಕರ್ಫ್ಯೂ ಆದೇಶ ಹೊರಡಿಸಲಾಗಿದೆ.

Delhi Violence: Prime Minister Narendra Modi Appela To Peace And Harmony

ಖಜೂರಿ ಖಾಸ್ ಪ್ರದೇಶದಲ್ಲಿ ರಾಪಿಡ್ ಆಕ್ಷನ್ ಫೋರ್ಸ್ ಫ್ಲಾಗ್ ಮಾರ್ಚ್ ನಡೆಸಿದ್ದು, ಮೌಜ್ ಪುರ್, ಜಫ್ರಾಬಾದ್, ಮೌಜ್ ಪುರ್ ಚೌಕ್, ಚಾಂದ್ ಬಾಗ್ ಮತ್ತು ಭಜನ್ ಪುರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

English summary
Delhi Violence: Prime Minister Narendra Modi appeal To Peace And Harmony In Twitter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X