ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮಿತ್ ಶಾ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಸೋನಿಯಾ ಗಾಂಧಿ

|
Google Oneindia Kannada News

ನವದೆಹಲಿ, ಫೆಬ್ರವರಿ 26: ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವುದರಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸೋತಿದ್ದಾರೆ, ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಒತ್ತಾಯಿಸಿದ್ದಾರೆ.

Recommended Video

Sonia Gandhi asks Amit Shah to resign because of the Delhi situation | Sonia Gandhi | Amit Shah

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ದೆಹಲಿ ಹಿಂಸಾಚಾರದ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ದೆಹಲಿ ಹಿಂಸಾಚಾರವನ್ನು ಯೋಜಿತ ಪಿತೂರಿ ಎಂದು ಕರೆದಿರುವ ಸೋನಿಯಾ ಗಾಂಧಿ, ಕಳೆದ 72 ಗಂಟೆಗಳಲ್ಲಿ ದೆಹಲಿ ಪೊಲೀಸರು ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

sonia

ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ದೆಹಲಿಯಲ್ಲಿ ಭುಗಿಲೆದ್ದ ಘರ್ಷಣೆ ಹಿಂಸಾಚಾರದ ಸ್ವರೂಪವನ್ನು ಪಡೆದುಕೊಂಡಿದ್ದು ಇದುವರೆಗೂ 20 ಜನರು ಸಾವನ್ನಪ್ಪಿದ್ದಾರೆ. ಗಲಬೆಯಲ್ಲಿ 150 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ದೆಹಲಿ ಸಂಘರ್ಷ: ಹೆಡ್ ಕಾನ್‌ಸ್ಟೆಬಲ್ ಸಾವಿನ ಪ್ರಕರಣಕ್ಕೆ ತಿರುವುದೆಹಲಿ ಸಂಘರ್ಷ: ಹೆಡ್ ಕಾನ್‌ಸ್ಟೆಬಲ್ ಸಾವಿನ ಪ್ರಕರಣಕ್ಕೆ ತಿರುವು

ಗಲಭೆಯಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಸೋನಿಯಾ ಗಾಂಧಿ, ಇಷ್ಟೆಲ್ಲಾ ನಡೆಯುತ್ತಿದ್ದರೂ ಕೇಂದ್ರ ಗೃಹ ಸಚಿವರು ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿದ ಅವರು ಗ್ರಾಮಗಳಲ್ಲಿ ಶಾಂತಿ ಸಮಿತಿಯನ್ನು ರಚನೆ ಮಾಡುವಂತೆ ಆಗ್ರಹಿಸಿದ್ದಾರೆ.

ಆದರೆ, ಈ ಗಲಭೆಗೆ ಕೇಂದ್ರ ಸರ್ಕಾರದ ನಿಷ್ಕ್ರಿಯತೆಯೇ ಕಾರಣ. ಹೀಗಾಗಿ ಮೊದಲು ಕೇಂದ್ರ ಸರ್ಕಾರ ಈ ಹಿಂಸಾಚಾರವನ್ನು ಅರಿತುಕೊಳ್ಳಬೇಕು ಮತ್ತು ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

English summary
Congress president Sonia Gandhi has asked Home Minister Amit Shah to resign in the wake of three days of violence in northeast Delhi, in which 20 have been killed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X