ದೆಹಲಿ: ಪತಿ ಮತ್ತು ಮಗನೆದುರೇ ಮಹಿಳೆಗೆ ಗುಂಡಿಕ್ಕಿ ಹತ್ಯೆ
ನವದೆಹಲಿ, ಅಕ್ಟೋಬರ್ 25: ಕಾರಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಪತಿ ಮತ್ತು ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ದೆಹಲಿಯ ಶಾಲಿಮರ್ ಬಾಗ್ ನಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಸಮಯದಲ್ಲಿ ಘಟನೆ ನಡೆದಿದೆ.

ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲವಾದರೂ, ಕೆಲ ದಿನಗಳ ಹಿಂದೆ ಮಹಿಳೆಯ ಬಳಿ ಇದ್ದ ಹಣ ದರೋಡೆ ಮಾಡಲು ಬಂದಿದ್ದ ಕೆಲವು ದರೋಡೆಕೋರರನ್ನು ಈ ಮಹಿಳೆ ತಡೆದಿದ್ದರು. ಅವರೇ ಈ ಕೃತ್ಯ ಎಸಗಿರಬಹುದು ಎಂಬ ಅನುಮಾನದ ಮೇಲೆ ತನಿಖೆ ನಡೆಯುತ್ತಿದೆ.












Click it and Unblock the Notifications