ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾನುವಾರ ಮಧ್ಯಾಹ್ನ ಅರುಣ್ ಜೇಟ್ಲಿ ಅಂತ್ಯಕ್ರಿಯೆ: ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

|
Google Oneindia Kannada News

ನವದೆಹಲಿ, ಆಗಸ್ಟ್ 24: ದೀರ್ಘಕಾಲದ ಅನಾರೋಗ್ಯದ ಬಳಿಕ ಶನಿವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನದ ಬಳಿಕ ನಡೆಯಲಿದೆ.

Breaking News ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಇನ್ನಿಲ್ಲBreaking News ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ

ಏಮ್ಸ್ ಆಸ್ಪತ್ರೆಯಲ್ಲಿ ಪ್ರಕ್ರಿಯೆಗಳು ಮುಗಿದ ಬಳಿಕ ಜೇಟ್ಲಿ ಮೃತದೇಹವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಶನಿವಾರ ಅವರ ಮೃತದೇಹವನ್ನು ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. ಬಳಿಕ ಭಾನುವಾರ ಬೆಳಿಗ್ಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅವರ ಮೃತದೇಹವನ್ನು ಬಿಜೆಪಿ ಕೇಂದ್ರ ಕಚೇರಿಗೆ ತರಲಾಗುತ್ತದೆ.

Demised Arun Jaitley Final Cremation Will Be Held on Sunday Afternoon

ಅಲ್ಲಿ ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಅವರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನದ ಬಳಿಕ ನಿಗಂಬೋಧ್ ಘಾಟ್‌ನಲ್ಲಿ ಕುಟುಂಬದ ಸಾಂಫ್ರದಾಯಿಕ ವಿಧಿ ವಿಧಾನಗಳಂತೆ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ತಿಳಿಸಿದರು.

ಮಧ್ಯಾಹ್ನ ಎರಡು ಗಂಟೆಯ ಸುಮಾರಿಗೆ ಅವರ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ.

ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ಆಗಸ್ಟ್ 9ರಂದು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಿಸಲಾಗಿತ್ತು.

English summary
Final cremation of demised former union minister Arun Jaitley will be held on Sunday afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X