ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಶಾಹಿನ್ ಬಾಗ್‌ ಕಟ್ಟಡ ತೆರವು, ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ

|
Google Oneindia Kannada News

ನವದೆಹಲಿ, ಮೇ 09; ದಕ್ಷಿಣ ದೆಹಲಿಯ ಶಾಹಿನ್ ಬಾಗ್ ಪ್ರದೇಶದಲ್ಲಿನ ಕಟ್ಟಡ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ದಕ್ಷಿಣ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಿಲ್ಲಿಸಿದ್ದಾರೆ.

ಸೋಮವಾರ ಶಾಹಿನ್ ಬಾಗ್ ಪ್ರದೇಶದಲ್ಲಿನ ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಕಾರ್ಯಾಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ಥಳದಲ್ಲಿ ಪ್ರತಿಭಟನೆ ಸಹ ನಡೆಯುತ್ತಿದೆ. ಈ ಕಾರ್ಯಾಚರಣೆಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲಾಗಿತ್ತು.

ಶಿವರಾಮ ಕಾರಂತ ಬಡಾವಣೆ ಕಟ್ಟಡ ಮಾಲೀಕರಿಗೆ ಸಂತಸದ ಸುದ್ದಿ ಶಿವರಾಮ ಕಾರಂತ ಬಡಾವಣೆ ಕಟ್ಟಡ ಮಾಲೀಕರಿಗೆ ಸಂತಸದ ಸುದ್ದಿ

ಕಾರ್ಯಾಚರಣೆಗೆ ತಡೆ ನೀಡಬೇಕು ಎಂದು ಸಿಪಿಐ(ಎಂ) ಪಕ್ಷ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಎಲ್. ನಾಗೇಶ್ವರರಾವ್, ಬಿ. ಆರ್. ಗಾವಿ ಅವರಿದ್ದ ದ್ವಿಸದಸ್ಯ ಪೀಠ ಈ ವಿಚಾರದಲ್ಲಿ ಮಧ್ಯ ಪ್ರವೇಶಕ್ಕೆ ನಿರಾಕರಿಸಿದೆ ಮತ್ತು ಅರ್ಜಿದಾರರಿಗೆ ಹೈಕೋರ್ಟ್‌ಗೆ ಹೋಗುವಂತೆ ಸಲಹೆ ನೀಡಿದೆ.

ಜಹಾಂಗೀರ್‌ಪುರಿ ಹಿಂಸಾಚಾರ ಘಟನೆಗೂ ಕಟ್ಟಡ ತೆರವು ಕಾರ್ಯಾಚರಣೆಗೂ ಏನು ಸಂಬಂಧ? ಜಹಾಂಗೀರ್‌ಪುರಿ ಹಿಂಸಾಚಾರ ಘಟನೆಗೂ ಕಟ್ಟಡ ತೆರವು ಕಾರ್ಯಾಚರಣೆಗೂ ಏನು ಸಂಬಂಧ?

Demolition In Shaheen Bagh; Supreme Court Refuses To Interfere

ಶಾಹಿನ್ ಬಾಗ್ ಪ್ರದೇಶದಲ್ಲಿ ನಡೆಯುತ್ತಿರುವ ಕಟ್ಟಡ ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಕೋರಿ ಸಿಪಿಐ(ಎಂ) ಪಕ್ಷ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಸೋಮವಾರ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

45 ದಿನಗಳಲ್ಲಿ ನಿರ್ಮಿಸಿದ ಡಿಆರ್‌ಡಿಓದ ಫ್ಲೈಟ್ ಕಂಟ್ರೋಲ್ ಸಿಸ್ಟಂ ಕಟ್ಟಡ ಉದ್ಘಾಟನೆ45 ದಿನಗಳಲ್ಲಿ ನಿರ್ಮಿಸಿದ ಡಿಆರ್‌ಡಿಓದ ಫ್ಲೈಟ್ ಕಂಟ್ರೋಲ್ ಸಿಸ್ಟಂ ಕಟ್ಟಡ ಉದ್ಘಾಟನೆ

ಪಕ್ಷ ಕಾರ್ಯಾಚರಣೆ ವಿರುದ್ಧ ಅರ್ಜಿ ಸಲ್ಲಿಕೆ ಮಾಡಿರುವುದಕ್ಕೂ ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ. ಪಕ್ಷದ ಬದಲು ವ್ಯಕ್ತಿ, ಸಂಸ್ಥೆಯಾಗಿ ಅರ್ಜಿ ಸಲ್ಲಿಸಬಹುದಿತ್ತು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

English summary
Demolition in Shaheen Bagh area of south Delhi. On Monday supreme court refused to interfere. Court asked petitioner to better approach high court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X