ನೋಟು ನಿಷೇಧ ಅರ್ಜಿ ನಿರಾಕರಿಸಿದ ಸುಪ್ರಿಂಕೋರ್ಟ್

Posted By:
Subscribe to Oneindia Kannada

ನವದೆಹಲಿ, ನವೆಂಬರ್, 15: ರೂ. 500 ಹಾಗೂ ರೂ. 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಕೂಡಲೇ ಹಿಂಪಡೆಯಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನೋಟು ನಿಷೇಧಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಮುಖ್ಯ ನ್ಯಾಯಮೂರ್ತಿ ಟಿ. ಎಲ್ .ಠಾಕೂರ್ ಹಾಗು ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಪೀಠ ವಿಚಾರಣೆ ನಡೆಸಿತು.

Demonetisation: Won't interfere, but please help people, says SC

ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ವಿಚಾರಣೆಯನ್ನು ನವೆಂಬರ್ 25ಕ್ಕೆ ಮುಂದೂಡಿದೆ.[ಸೂರತ್ ವ್ಯಾಪಾರಿ 6 ಸಾವಿರ ಕೋಟಿ ಸರಕಾರಕ್ಕೆ ಒಪ್ಪಿಸಿದರಾ?]

ನೋಟುಗಳ ಮೇಲೆ ನಿಷೇಧ ಹೇರಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮದಿಂದ ನಾಗರಿಕರ ವ್ಯವಹರಿಸುವ ಹಕ್ಕು ಉಲ್ಲಂಘನೆಯಾಗಿದೆ, ಆದ್ದರಿಂದ ಕೂಡಲೇ ಈ ನಿಷೇಧವನ್ನು ಹಿಂಪಡೆಯಬೇಕೆಂದು ದೆಹಲಿ ಮೂಲದ ವಿವೇಕ್ ನಾರಾಯಣ ಶರ್ಮಾ ಮತ್ತು ಸಂಗಮ್ ಲಾಲ್ ಪಾಂಡೆ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಕಪ್ಪು ಹಣಕ್ಕೆ ಕಡಿವಾಣ ಹಾಗೂ ಭ್ರಷ್ಟಾಚಾರ ಹಾಗು ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಈ ಹಳೆಯ ನೋಟುಗಳನ್ನು ನಿಷೇಧ ಮಾಡುತ್ತಿರುವುದಾಗಿ ಪ್ರಧಾನಿ ಮೋದಿ ಅವರು ನವೆಂಬರ್ 8ರಂದು ಘೋಷಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Supreme Court asked the centre to file a detailed affidavit on the steps it was taking to ease problems of people in the aftermath of demonetisation.
Please Wait while comments are loading...