ದೆಹಲಿ ಚುನಾವಣೆ: ಕಾಂಗ್ರೆಸ್ ಬಗ್ಗೆ ದೇವೇಗೌಡ ಭವಿಷ್ಯ

ತುಮಕೂರು, ಜನವರಿ 31: ಇತ್ತೀಚೆಗೆ ಬಿಜೆಪಿ ವಿರುದ್ಧ ಸೂಕ್ಷ್ಮ ವಾಗ್ದಾಳಿಗಳನ್ನೇ ಮಾಡುತ್ತಾ ಬಂದಿದ್ದ ದೇವೇಗೌಡರು ಮಾಜಿ ಮಿತ್ರ ಪಕ್ಷ ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿದ್ದಾರೆ.

ನಿನ್ನೆ ತುಮಕೂರಿನಲ್ಲಿ ಮಾತನಾಡಿದ ದೇವೇಗೌಡ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಜೆಡಿಎಸ್ ನಾಯಕರು ಕಾಂಗ್ರೆಸ್ ಕಡೆ ಹೊರಟಿದ್ದಾರಲ್ಲ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ದೇಶದಲ್ಲಿ ಕಾಂಗ್ರೆಸ್ ಯಾವ ಸ್ಥಿತಿಯಲ್ಲಿದೆ ಎಂಬುದು ಗೊತ್ತಿಲ್ಲವೇ?' ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

Deve Gowda Sights Congress Loss In Delhi Elections

ಮುಂದುವರಿದು ಮಾತನಾಡಿದ ದೇವೇಗೌಡರು, 'ನಾನು ದೇಶದ ರಾಜಕೀಯ ನೋಡಿರುವವನು, ಈಗಲ್ಲ, ದೆಹಲಿ ಚುನಾವಣೆ ನಂತರ ಕಾಂಗ್ರೆಸ್ ಬಗ್ಗೆ ಮಾತನಾಡುತ್ತೇನೆ' ಎಂದು ವ್ಯಂಗ್ಯವಾಗಿ ಹೇಳಿದರು. ಆ ಮೂಲಕ ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಮದುವೆ ಕಾರ್ಯಕ್ರಮಗಳಲ್ಲಿ ಪ್ರಸ್ತುತ ಬ್ಯುಸಿಯಾಗಿರುವ ದೇವೇಗೌಡ ಅವರು ದೆಹಲಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+