• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೋನಿಯಾ ಹಾಗೂ ರಾಹುಲ್ ಭೇಟಿ ಮಾಡಲಿರುವ ದೊಡ್ಡಗೌಡರು

|

ಬೆಂಗಳೂರು, ಜೂನ್ 10: ಲೋಕಸಭಾ ಚುನಾವಣೆ ಸೋಲಿನ ಬಳಿಕ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರು ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕಿದೆ : ಎಚ್.ನಾಗೇಶ್

ಫಲಿತಾಂಶ ಹೊರಬಿದ್ದ ಬಳಿಕ ದೆಹಲಿಯತ್ತ ನೋಡದ ದೇವೇಗೌಡರು ಇದೀಗ ಏಕಾಏಕಿ ಆಕಡೆಗೆ ಪ್ರಯಾಣ ಬೆಳೆಸಲಿದ್ದಾರೆ, ಶುಕ್ರವಾರವಷ್ಟೇ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ್ದ ದೇವೇಗೌಡರು ಸೋಲಿನಿಂದಾಗಿ ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ, ಪಕ್ಷವನ್ನು ಮತ್ತೆ ಸಂಘಟಿಸುತ್ತೇನೆ ಎನ್ನುವ ಮಾತುಗಳನ್ನಾಡಿದ್ದರು.

ಸಂಪುಟ ವಿಸ್ತರಣೆ : ದೇವೇಗೌಡ ಭೇಟಿಯಾದ ಕುಮಾರಸ್ವಾಮಿ

ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಿರುವ ದೇವೇಗೌಡರು ಸೋಮವಾರ ಸಂಜೆ ವಾಪಸಾಗಲಿದ್ದಾರೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಸಂಪು ವಿಸ್ತರಣೆ ನಡೆಯಲಿದ್ದು ಸಚಿವ ಆಯ್ಕೆ ಕುರಿತಂತೆಯೂ ಮಾತಕತೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭೇಟಿ ವೇಳೆ ರಾಜ್ಯ ರಾಜಕಾರಣದಲ್ಲಿನ ಪ್ರಸಕ್ತ ವಿದ್ಯಾಮಾನಗಳ ಬಗ್ಗೆಯೂ ಪ್ರಸ್ತಾಪವಾಗಲಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಸುಭದ್ರಗೊಳಸಿಉವ ಕುರಿತು ಕಾರ್ಯತಂತ್ರ ರೂಪಿಸುವ ಸಾಧ್ಯತೆ ಇದೆ. ಜೆಡಿಎಸ್‌ನ ಒಂದು ಹೆಚಚ್ಉವರಿ ಸಚಿವ ಸ್ಥಾನವನ್ನು ಯಾರಿಗೆ ನೀಡುವುದು ಎಂಬುದರ ಬಗ್ಗೆಯೂ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

English summary
After the parliment election result HD Deve gowda visiting Delhi first time, he will meet Sonia and Rahul Gandhi too.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X