ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆಗಾಗಿ ಗಡ್ಕರಿಯನ್ನು ಭೇಟಿ ಮಾಡಿದ ದೇವೇಗೌಡ

|
Google Oneindia Kannada News

Recommended Video

ಮೇಕೆದಾಟು ಯೋಜನೆ : ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ ಹೆಚ್.ಡಿ ದೇವೇಗೌಡ | Oneindia Kannada

ನವದೆಹಲಿ, ಅ.4: ಮೇಕೆದಾಟು ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರಕ್ಕೆ ಅಗತ್ಯ ಅನುಮತಿ ನೀಡಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭರವಸೆ ನೀಡಿದರು.

ಎಚ್ಡಿಕೆ- ನಿತಿನ್ ಗಡ್ಕರಿ ಮಹತ್ವದ ಸಭೆ: ಯಾವ ಯಾವ ಹೆದ್ದಾರಿಗೆ ರಾಜ್ಯದಿಂದ ಮನವಿ ಎಚ್ಡಿಕೆ- ನಿತಿನ್ ಗಡ್ಕರಿ ಮಹತ್ವದ ಸಭೆ: ಯಾವ ಯಾವ ಹೆದ್ದಾರಿಗೆ ರಾಜ್ಯದಿಂದ ಮನವಿ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರಿಂದ ಈ ಕುರಿತ ಮನವಿ ಸ್ವೀಕರಿಸಿದ ಬಳಿಕ, ಯೋಜನೆ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸುವ ಮೂಲಕ ಅನುಮತಿ ನೀಡುವುದಾಗಿ ನಿತಿನ್ ಗಡ್ಕರಿ ತಿಳಿಸಿದ್ದಾರೆ.

Devegowda meets Gadkari on Mekedaatu project

ಕಾವೇರಿ ನದಿ ನೀರಿನ ಸದ್ಬಳಕೆ ಹಾಗೂ ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲಿರುವ ಈ ಯೋಜನೆಯಿಂದ ತಮಿಳುನಾಡಿನ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗುವುದಿಲ್ಲ. ಕಾವೇರಿ ನದಿ ನೀರು ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಈ ಯೋಜನೆಯಿಂದ ಉಲ್ಲಂಘನೆಯಾಗದು ಎಂದು ದೇವೇಗೌಡ ಅವರು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು .

ಬೆಂಗಳೂರು-ಮೈಸೂರು ಷಟ್ಪಥ ಹೆದ್ದಾರಿ: ನಿತಿನ್ ಗಡ್ಕರಿ ಶಂಕುಸ್ಥಾಪನೆ ಬೆಂಗಳೂರು-ಮೈಸೂರು ಷಟ್ಪಥ ಹೆದ್ದಾರಿ: ನಿತಿನ್ ಗಡ್ಕರಿ ಶಂಕುಸ್ಥಾಪನೆ

Devegowda meets Gadkari on Mekedaatu project

ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಕಾವೇರಿಯ ಹೆಚ್ಚುವರಿ ನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಯೋಜನೆ ರೂಪಿಸಿರುವ ಕರ್ನಾಟಕ, ಜಲವಿದ್ಯುತ್‌ ಉತ್ಪಾದನೆ ಹಾಗೂ ಬೆಂಗಳೂರು, ರಾಮನಗರ ಮತ್ತು ಕನಕಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ರೂಪುರೇಷೆ ಸಿದ್ಧಪಡಿಸಿದೆ.

English summary
Former prime minister H.D.Devegowda has met union water resources minister Nitin Gadkari seeking nod for Mekedatu project on Thursday in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X