ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ 150 ಪೈಲೆಟ್ ಗಳಿಗೆ ನೋಟಿಸ್ ಜಾರಿ: ಯಾಕೆ ಗೊತ್ತೆ?

|
Google Oneindia Kannada News

ನವದೆಹಲಿ, ಜನವರಿ.07: ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತಾರೆ. ಆದರೆ, ಮಾಡುವ ಕೆಲಸದಲ್ಲಿ ಸ್ವಲ್ಪ ನಿರ್ಲಕ್ಷ್ಯ ತೋರಿದ್ದಕ್ಕೆ ಒಂದಲ್ಲ ಎರಡಲ್ಲ ಬರೋಬ್ಬರಿ 150 ಪೈಲೆಟ್ ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಹೌದು, ಗೋ ಏರ್ ವಿಮಾನಗಳ ಪೈಲೆಟ್ ಗಳಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ನೋಟಿಸ್ ಜಾರಿಗೊಳಿಸಿದೆ. ಪೈಲಟ್ ಗಳು ತಮ್ಮ ಕರ್ತವ್ಯಕ್ಕೆ ಸರಿಯಾದ ವೇಳೆಯಲ್ಲಿ ಹಾಜರಾಗುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಾರಣ ನೀಡುವಂತೆ ಎಲ್ಲರಿಗೂ ನೋಟಿಸ್ ನೀಡಲಾಗಿದೆ.

100 ಪ್ರಯಾಣಿಕರಿದ್ದ ವಿಮಾನ ಟೇಕಾಫ್ ವೇಳೆ ಅಪಘಾತ: ಕನಿಷ್ಠ 14 ಸಾವು100 ಪ್ರಯಾಣಿಕರಿದ್ದ ವಿಮಾನ ಟೇಕಾಫ್ ವೇಳೆ ಅಪಘಾತ: ಕನಿಷ್ಠ 14 ಸಾವು

150 ಪೈಲಟ್ ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಪೈಲಟ್ ಗಳ ನಿಷ್ಕಾಳಜಿಯಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಕಾರಣವನ್ನು ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

DGCA Notice To 150 GoAir Pilots For FDTL Violation In Delhi

ಸಮಯ ಪ್ರಜ್ಞೆ ತೋರದ ಪೈಲಟ್ ಗಳಿಗೆ ನೋಟಿಸ್:

ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಂಸ್ಥೆಯು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ಈ ಸಂಬಂಧ 150 ಪೈಲಟ್ ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಿಷ್ಕಾಳಜಿ ತೋರಲು ಕಾರಣವೇನು ಎಂದು ನೋಟಿಸ್ ನಲ್ಲಿ ಪ್ರಶ್ನೆ ಮಾಡಲಾಗಿದೆ.

English summary
Directorate General of Civil Aviation Noticed To 150 GoAir Pilots For Duty Time Violation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X