ಭಾರತದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ ತಿಳಿಸಿದ ಗಣ್ಯರು
ಬೆಂಗಳೂರು ಜುಲೈ 25: ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸುವ ಮೂಲಕ 15ನೇ ರಾಷ್ಟ್ರಪತಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು ಅವರಿಗೆ ರಾಜಕೀಯ ಸೇರಿದಂತೆ ವಿವಿಧ ವಲಯಗಳ ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
ಬಿಹಾರದ ಸಂಸದ ರವಿ ಶಂಕರ್ ಪ್ರಸಾದ್ ಅವರು, ಭಾರತದ ನೂತನ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳು. ನಿಮ್ಮ ಸರಳತೆ ಮತ್ತು ಸಾರ್ವಜನಿಕ ಜೀವನದಲ್ಲಿ ನಿಮ್ಮ ಅಪಾರ ಅನುಭವ ದೇಶಕ್ಕೆ ಪ್ರಯೋಜನಕಾರಿ ಆಗಲಿದೆ ಎಂದು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
Koo AppA golden day for aspiring India. The second woman to be the president and the first tribal leader to occupy the country’s highest constitutional post. My hearty congratulations to #DroupadiMurmu avaru on becoming the 15th President of India. @droupadimurmu_ - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 25 July 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವಿಟ್ ಮಾಡಿದ್ದು, ಭಾರತ ಗಣರಾಜ್ಯದ 15ನೇ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ಅಭಿನಂದನೆಗಳು. ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಳೇ ಇದೊಂದು ಸುವರ್ಣ ದಿನವಾಗಿದೆ. ದ್ರೌಪದಿ ಮುರ್ಮು ಅವರ ನಿರೂಪಣೆಯೇ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ. ಬಡ ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಒಬ್ಬ ಹುಡುಗಿಯ ಜೀವನ, ಸಾಧನೆಯ ಹಾದಿ ರಾಷ್ಟ್ರಪತಿ ಭವನದವರೆಗೂ ಬಂದು ನಿಲ್ಲುತ್ತದೆ ಎಂದರೆ ಅದು ಎಲ್ಲಿರಿಗೂ ಸ್ಪೂರ್ತಿಯಾಗುವಂತದ್ದೆ ಎಂದು ಮುರ್ಮು ಬದಕನ್ನು ಬೊಮ್ಮಾಯಿ ಶ್ಲಾಘಿಸಿ ಅಭಿನಂದತೆ ತಿಳಿಸಿದ್ದಾರೆ.

Koo Appಭಾರತದ 15ನೇ ರಾಷ್ಟ್ರಪತಿಯಾಗಿ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ಪ್ರಥಮ ಬಾರಿಗೆ ರಾಷ್ಟ್ರಪತಿಯಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂದ ಗೌರವ. ತಮಗೆ ಯಶಸ್ಸನ್ನು ಕೋರುತ್ತೇನೆ. #PresidentofIndia #Droupadimurmu - Araga Jnanendra (@aragajnanendra) 25 July 2022
ಕರ್ನಾಕಟದ ಉನ್ನತ ಶಿಕ್ಷಣ ಮತ್ತು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಅವರು, ಬುಡಕಟ್ಟು ಜನಾಂಗ ಮಹಿಳೆಯೊಬ್ಬರು ದೇಶದ ಸಾಂವಿಧಾನಿಕ ಉನ್ನತ ಹುದ್ದೆ ಅಲಂಕರಿಸಿದ ಈ ದಿನ ಭಾರತಕ್ಕೆ ಸುವರ್ಣ ದಿನವಾಗಿದೆ. ಭಾರತದ ಅಧ್ಯಕ್ಷರಾದ ಎರಡನೇ ಮಹಿಳೆ ದ್ರೌಪತಿ ಮುರ್ಮು ಅವರಾಗಿದ್ದಾರೆ ಎಂದರು.
ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ನಾಯಕಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ದೇಶದ ನೂತನ 15 ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಅದೇ ರೀತಿ ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಸಹ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸಿದ್ದಾರೆ. ಭಾರತದ ಅತ್ಯುನ್ನತ ಹುದ್ದೆಯ ಪ್ರಮಾಣ ವಚನ ಸ್ವೀಕರಿಸುವ ಮುಲಕ ನೂತನ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಯಶಸ್ವಿಯಾಗಿ ಅಧಿಕಾರ ನಡೆಸುವಂತಾಗಲಿ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ಪ್ರಥಮ ಬಾರಿಗೆ ರಾಷ್ಟ್ರಪತಿಯಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂದ ಗೌರವ ಎಂದು ಗೃಹ ಸಚಿವರು ಶುಭ ಹಾರೈಸಿ ಕೂ ಮಾಡಿದ್ದಾರೆ.
Koo Appಭಾರತದ ಪರಮೋಚ್ಛ ಹುದ್ದೆ ಅಲಂಕರಿಸಿದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ತಮ್ಮ ಈ ಸಾಧನೆ ದೇಶದ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯ ಗೆಲುವು, ಪ್ರಜಾಪ್ರಭುತ್ವ ವ್ಯವಸ್ಥೆಯ ಗೆಲುವು. ತಮ್ಮ ರಾಷ್ಟ್ರಸೇವೆ ನಿರಾತಂಕವಾಗಿ ಸಾಗಲಿ. ತಮಗೆ ಸಂಪೂರ್ಣ ಯಶಸ್ಸನ್ನು ಬಯಸುತ್ತೇನೆ. #PresidentofIndia #DroupadiMurmu - ಕೆ ಗೋಪಾಲಯ್ಯ (@kgopaliahbjp) 25 July 2022
ಭಾರತ ದೇಶದ ಪರಮೋಚ್ಛ ಹುದ್ದೆ ಅಲಂಕರಿಸಿದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಅಬಕಾರಿ ಖಾತೆ ಸಚಿವ ಕೆ.ಗೋಪಾಲಯ್ಯ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ. ನಿಮ್ಮ ಈ ಸಾಧನೆ ದೇಶದ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯ ಗೆಲುವು ಆಗಿದೆ. ಬುಡಕಟ್ಟು ಜನಾಂಗ ಒಬ್ಬ ಮಹಿಳೆ ಇಂದು ರಾಷ್ಟ್ರಪತಿ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಗೆಲುವು ಕೂಡ ಆಗಿದೆ. ತಮ್ಮ ರಾಷ್ಟ್ರಸೇವೆ ನಿರಾತಂಕವಾಗಿ ಸಾಗಲಿ, ತಾವು ಯಶಸ್ವಿ ಆಡಳಿತ ನೀಡುವಂತಾಗಲಿದೆ ಎಂದು ಅವರು ಕೂ ಮೂಲಕ ಹಾರೈಸಿದ್ದಾರೆ.
Recommended Video
ಜುಲೈ 21ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. ಕಾಂಗ್ರೆಸ್‌ನ ಚುನಾವಣೆ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಮುರ್ಮು ಅವರು ಸೋಲಿಸಿ ಗೆಲುವು ಸಾಧಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಸಹ ಅಡ್ಡ ಮತದಾನ ಮೂಲಕ ಮುರ್ಮು ಗೆಲುವಿಗೆ ಸಾಕ್ಷಿಯಾದರು. ಅದರಂತೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ದ್ರೌಪದಿ ಮುರ್ಮು ಅವರು ನಡೆದು ಬಂದ ಹಾದಿ, ಅವರ ದೇಶಭಕ್ತಿ, ಅನುಭವ ಕುರಿತು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications