ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ನಡುವೆ ಕುಂಭಮೇಳ; ಧನ್ಯವಾದ ಎಂದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

|
Google Oneindia Kannada News

ನವದೆಹಲಿ, ಮಾರ್ಚ್ 16: ಕೊರೊನಾ ಪ್ರಕರಣಗಳ ಏರಿಕೆ ನಡುವೆಯೂ ಉತ್ತರಾಖಂಡದ ಕುಂಭಮೇಳದಲ್ಲಿ ಭಾಗವಹಿಸಲು ಲಕ್ಷಾಂತರ ಮಂದಿಗೆ ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕೇಂದ್ರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾದಿಂದಾಗಿ ಅಹಮದಾಬಾದ್‌ನ ಕ್ರೀಡಾಂಗಣಕ್ಕೆ ಜನರನ್ನು ನಿರ್ಬಂಧಿಸಲಾಗಿದೆ. ಆದರೆ ಉತ್ತರಾಖಂಡದಲ್ಲಿ ನಡೆಯುವ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರಿಗೆ ಅವಕಾಶ ನೀಡಲಾಗಿದೆ. ಧನ್ಯವಾದಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ದೇಣಿಗೆಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ದೇಣಿಗೆ

ಉತ್ತರಾಖಂಡದಲ್ಲಿ ಕುಂಭಮೇಳಕ್ಕೆ ಆಗಮಿಸುವ ಭಕ್ತರಿಗೆ ಕೊರೊನಾ ನೆಗೆಟಿವ್ ವರದಿ ತರುವ ಅವಶ್ಯಕತೆ ಇಲ್ಲ ಎಂದು ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್ ಸೋಮವಾರವಷ್ಟೆ ಘೋಷಿಸಿದ್ದರು. 32 ರಿಂದ 33 ಲಕ್ಷ ಭಕ್ತರು ಮೊದಲ ದಿನದ ಪವಿತ್ರ ಸ್ನಾನದಲ್ಲಿ ಭಾಗವಹಿಸಿದ್ದರು. ಕೊರೊನಾ ಕಾರಣದಿಂದಾಗಿ ಈ ಬಾರಿ ಕುಂಭಮೇಳವನ್ನು ಮೂವತ್ತು ದಿನಗಳಿಗೆ ಇಳಿಸಲಾಗಿದೆ ಎಂದು ತಿಳಿಸಿದ್ದರು.

Digvijay Singh Slams Centre Over Allowing People For Kumbh Amid Rising Corona Cases

ಈ ಕಾರಣವಾಗಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 24,492 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. 131 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,23,432ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

English summary
Senior congress leader Digvijay Singh slams centre for allowing lakhs of people to kumbh mela in uttarakhand amid rising corona cases
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X