ಮೋದಿ ವಿರುದ್ಧ ಮತ್ತೆ ದಿಗ್ವಿಜಯ್ ಸಿಂಗ್ ಗುಡುಗು

ನವದೆಹಲಿ, ಸೆ.22 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮತ್ತೊಮ್ಮೆ ಗುಡುಗಿದ್ದಾರೆ. ಯುಪಿಎ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಲು ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.

ಭಾನುವಾರ ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನರೇಂದ್ರ ಮೋದಿ ಮಾತನಾಡಿದ್ದರು. ಯುಪಿಎ ಸರ್ಕಾರ ಒಂಭತ್ತು ವರ್ಷಗಳ ಕಾಲ ದೇಶದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವರದಿ ನೀಡುವಂತೆ ಸವಾಲು ಹಾಕಿದ್ದರು.

Digvijay Singh

ಇದಕ್ಕೆ ಪ್ರತಿಕ್ರಿಯೆ ನೀಡಿರುವ ದಿಗ್ವಿಜಯ್ ಸಿಂಗ್, ಯುಪಿಎ ಸರ್ಕಾರ ತನ್ನ ಪ್ರತಿಯೊಂದು ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುತ್ತದೆ. ಯುಪಿಎ ವಿರುದ್ಧ ಜನರಿಗೆ ಮೋದಿ ಸುಳ್ಳು ಹೇಳುತ್ತಿದ್ದಾರೆ. ಮೋದಿ ಒಮ್ಮೆ ಯುಪಿಎ ವೆಬ್ ಸೈಟ್ ಗೆ ಭೇಟಿ ನೀಡುವುದು ಉತ್ತಮ ಎಂದು ಸಿಂಗ್ ಹೇಳಿದ್ದಾರೆ.

ಎನ್.ಡಿ.ಎ ಅಧಿಕಾರಾವಧಿಯಲ್ಲಿ ಇದ್ದ ಶೇ.8.4ರಷ್ಟು ಜಿಡಿಪಿ ದರವನ್ನು ಯುಪಿಎ ಸರ್ಕಾರ ಶೇ.4.8ಕ್ಕೆ ಇಳಿಸಿದೆ ಎಂಬ ಮೋದಿ ಹೇಳಿಕೆಗೂ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಂಗ್, ನರೇಂದ್ರ ಮೋದಿ ಯುಪಿಎ ಸರ್ಕಾರದ ವಿರುದ್ಧ ಸತ್ಯಕ್ಕೆ ದೂರವಾದ ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.(ನರೇಂದ್ರ ಮೋದಿ ಭಾಷಣ)

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿ ಏನೇ ಹೇಳಿದರೂ ಅದಕ್ಕೆ ತಪ್ಪದೇ ಕಾಂಗ್ರೆಸ್ ನವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಚುನಾವಣಾ ಸಮರಕ್ಕೆ ಉಭಯ ಪಕ್ಷಗಳಿಂದ ಭರ್ಜರಿ ತಯಾರಿ ನಡೆಯುತ್ತಿದೆ.

ದಿಗ್ವಿಜಯ್ ಟ್ವೀಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+