ದೀಪಕ್ ಮಿಶ್ರಾ ಅವರನ್ನು ಟ್ವಿಟ್ಟರ್ ನಲ್ಲಿ ಅಭಿನಂದಿಸಿದ ಗಣ್ಯರು

Posted By:
Subscribe to Oneindia Kannada

ನವದೆಹಲಿ, ಆಗಸ್ಟ್ 28: ಸುಪ್ರೀಂಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು(ಆಗಸ್ಟ್ 28) ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ದೀಪಕ್ ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಭಿನಂದಿಸಿದ್ದಾರೆ.

ಯಾಕೂಬ್ ಮೆಮೂನ್ ಗಲ್ಲು ಶಿಕ್ಷೆ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿ, ನೆನಪಿನಲ್ಲುಳಿಯುವಂಥ ಆದೇಶ ನೀಡಿದ ಮಿಶ್ರಾ, ಒಡಿಶಾ ಮೂಲದವರು. ನ್ಯಾ.ಜೆ.ಎಸ್.ಖೇಹರ್ ನಿನ್ನೆ(ಆಗಸ್ಟ್ 27) ನಿವೃತ್ತರಾದ ಹಿನ್ನೆಲೆಯಲ್ಲಿ 64 ವರ್ಷದ ದೀಪಕ್ ಮಿಶ್ರಾ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ಆರಿಸಲಾಗಿತ್ತು.

ನೂತನ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ದೀಪಕ್ ಮಿಶ್ರಾ

ಇಂದು ಬೆಳಗ್ಗಿನಿಂದ 'ದೀಪಕ್ ಮಿಶ್ರಾ' ಹ್ಯಾಶ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಿಶ್ರಾ ಅವರನ್ನು ಅಭಿನಂದಿಸಿದ್ದಾರೆ.

ಯಶಸ್ಸು ಸಿಗಲಿ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೀಪಕ್ ಮಿಶ್ರಾ ಅವರಿಗೆ ನನ್ನ ಅಭಿನಂದನೆಗಳು. ಅವರ ಅಧಿಕಾರಾವಧಿಯಲ್ಲಿ ಹೆಚ್ಚು ಹೆಚ್ಚು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಅಭಿನಂದನೆಗಳು

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತ ಸ್ಥಾನ ಪಡೆದ ದೀಪಕ್ ಮಿಶ್ರಾ ಅವರಿಗೆ ಅಭಿನಂದನೆಗಳು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದಾರೆ.

ಶುಭ ಹಾರೈಕೆ

ಸುಪ್ರೀಂಕೋರ್ಟ್ ನ 45ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೀಪಕ್ ಮಿಶ್ರಾ ಅವರಿಗೆ ಅಭಿನಂದನೆಗಳು. ಅವರ ಕಾರ್ಯಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.

ದಾಖಲೆ ಬರೆದ ಭಾರತ

ದೀಪಕ್ ಮಿಶ್ರಾ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ದಾಖಲೆಯೊಂದು ನಿರ್ಮಾಣವಾಯಿತು! ಪಶ್ಚಿಮ ಭಾರತದ ಪ್ರಧಾನಿ, ಉತ್ತರ ಭಾರತದ ರಾಷ್ಟ್ರಪತಿ, ದಕ್ಷಿಣ ಭಾರತದ ಉಪರಾಷ್ಟ್ರಪತಿ ಮತ್ತು ಪೂರ್ವ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊಂದುವ ಮೂಲಕ ಭಾರತ, ದಾಖಲೆ ಬರೆದಿದೆ ಎಂದು ಪ್ರವೀಣ್ ಕಸ್ವಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Justice Dipak Misra takes oath as new Chief Justice of India (CJI). President Ram Nath Kovind, PM Narendra Modi and others heartly congratulates Dipik Mishra in twitter. here are some twitter statements.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ