ಟ್ವೀಟ್ ಮಾಡಿ ಎಎಪಿಗೆ ರಾಜೀನಾಮೆ ಸಲ್ಲಿಸಿದ ಶಾಸಕಿ ಅಲ್ಕಾ ಲಂಬಾ

ನವದೆಹಲಿ, ಸೆ. 06: ದೆಹಲಿ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದ ಶಾಸಕಿ ಅಲ್ಕಾ ಲಂಬಾ ಅವರು ಕೊನೆಗೂ ಆಮ್ ಆದ್ಮಿ ಪಕ್ಷಕ್ಕೆ ಶುಕ್ರವಾರದಂದು ಟ್ವೀಟ್ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

"time to say good bye" ಎಂದು ಟ್ವೀಟ್‌ ಮಾಡಿದ್ದಾರೆ. ಲೋಕಸಭೆ ಚುನಾವಣೆ 2019 ವೇಳೆಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ಕೈಗೊಳ್ಳದ ಶಾಸಕಿ ಆಲ್ಕಾ ಲಂಬಾ ಅವರು ಪಕ್ಷ ತೊರೆಯುವ ಬಗ್ಗೆ ಸುಳಿವು ನೀಡಿದ್ದರು.

"ನನ್ನ ಕ್ಷೇತ್ರದ ಜನತೆ ಜೊತೆ ಈ ಬಗ್ಗೆ ಸಾಕಷ್ಟು ಬಾರಿ ಚರ್ಚೆ ನಡೆಸಿ, ತೀರ್ಮಾನ ಕೈಗೊಂಡಿದ್ದೇನೆ, ಎಎಪಿಯ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಳಾಗಿ, ಶಾಸಕಿಯಾಗಿ ಉಳಿಯುತ್ತೇನೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ" ಎಂದಿದ್ದಾರೆ.

"ನನ್ನ ಕ್ಷೇತ್ರದಲ್ಲಿ ಸಿಸಿಟಿವಿ ಕೆಮರಾ ಅಳವಡಿಕೆ, ಮೊಹಲ್ಲಾ ಕ್ಲಿನಿಕ್ ಸ್ಥಾಪನೆಗಾಗಿ ಮನವಿ ಸಲ್ಲಿಸಿದ್ದೇನೆ, ಈ ಬಗ್ಗೆ ನನ್ನ ಪ್ರಯತ್ನ ಮುಂದುವರೆಯಲಿದೆ" ಎಂದಿದ್ದಾರೆ.

"ಎಎಪಿ ಉದ್ದೇಶವೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ಆಗಿದ್ದಲ್ಲಿ ನಾನು ಕಾಂಗ್ರೆಸ್ ಸೇರಿ ಅಧಿಕೃತವಾಗಿ ಮೂಲ ಉದ್ದೇಶದ ಪರ ಹೋರಾಟ ನಡೆಸುವುದರಲ್ಲಿ ತಪ್ಪೇನಿಲ್ಲ" ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.

2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಲಂಬಾ

2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಲಂಬಾ

2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಲಂಬಾ, ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಸ್ಥಳೀಯವಾಗಿ ಜನಪ್ರಿಯತೆ ಉಳಿಸಿಕೊಂಡಿದ್ದಾರೆ. ಆದರೆ, ಶೀಲಾ ದೀಕ್ಷಿತ್ ಅವರು ಹಿಂತಿರುಗಿದ ಬಳಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎಎಪಿ ಮೈತ್ರಿ ಅಸಾಧ್ಯವಾಯಿತು. ಲೋಕಸಭೆ ಚುನಾವಣೆ 2019ರಲ್ಲಿ 7ಕ್ಕೆ ಏಳು ಕ್ಷೇತ್ರಗಳಲ್ಲಿ ಕಳಪೆ ಸಾಧನೆ ಮಾಡಿದ ಎಎಪಿಯ ಸೋಲಿಗೆ ಯಾರು ಹೊಣೆ ಎಂದು ಅರವಿಂದ್ ಕೇಜ್ರಿವಾಲ್ ರನ್ನು ಅಲ್ಕಾ ಪ್ರಶ್ನಿಸಿದ್ದರು.

ಲಂಬಾ ಅವರ ರಾಜೀನಾಮೆಗೆ ಆಗ್ರಹಿಸಿದ್ದರು

ಲಂಬಾ ಅವರ ರಾಜೀನಾಮೆಗೆ ಆಗ್ರಹಿಸಿದ್ದರು

ಕಳೆದ ಜುಲೈ ತಿಂಗಳು ಗ್ರೇಟರ್ ಕೈಲಾಶ್ ಕ್ಷೇತ್ರದ ಎಎಪಿ ಶಾಸಕ ಸೌರಭ್​ಭಾರದ್ವಾಜ್ ಜೊತೆ ಅಲ್ಕಾ ಲಂಬಾ ಟ್ವೀಟ್ ವಾರ್ ನಡೆಸಿದ್ದರು. ನಂತರ ಲಂಬಾ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಈ ಕುರಿತು ಮಾತನಾಡಿದ ಲಂಬಾ, "ಪಕ್ಷದ ನಾಯಕರು ಪದೇ ಪದೇ ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಏನೇ ಆಗಿದ್ದರೂ ಪಕ್ಷ ಮತ್ತು ನನ್ನ ನಡುವೆ ಆಗಿದೆ. ನನ್ನ ಕ್ಷೇತ್ರದ ಜನರ ಕೈಯನ್ನು ನಾನು ಬಿಡುವುದಿಲ್ಲ. ಅವರಿಂದ ಆಯ್ಕೆಯಾಗಿರುವ ನಾನು ಅವರ ಒಳಿತಿಗೆ ಪ್ರಾರ್ಥಿಸುತ್ತೇನೆ. ನನ್ನ ಕ್ಷೇತ್ರದ ಅಭಿವೃದ್ಧಿಯತ್ತ ಮಾತ್ರ ನಾನು ಗಮನ ಹರಿಸುತ್ತೇನೆ" ಎಂದಿದ್ದರು.

ಚುನಾವಣೆ ಸಂದರ್ಭದಲ್ಲಿ ಮೈತ್ರಿ ಏಕೆ ಸಾಧ್ಯವಾಗಲಿಲ್ಲ

ಚುನಾವಣೆ ಸಂದರ್ಭದಲ್ಲಿ ಮೈತ್ರಿ ಏಕೆ ಸಾಧ್ಯವಾಗಲಿಲ್ಲ

ದೆಹಲಿಯಲ್ಲದೆ, ಹರ್ಯಾಣ, ಪಂಜಾಬ್ ನಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಇನ್ನಿಲ್ಲದ್ದಂತೆ ಕಾಡಿ ಬೇಡಿದ ಎಎಪಿಯ ಹುಳುಕು ಎಲ್ಲರಿಗೂ ಗೊತ್ತಾಗಿದೆ, ದೆಹಲಿಯಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಏಕೆ ಸಾಧ್ಯವಾಗಲಿಲ್ಲ ಎಂಬುದು ಬಹಿರಂಗವಾಗಲಿ ಎಂದು ಅಲ್ಕಾ ಹೇಳಿದ್ದಾರೆ

ಕಾಂಗ್ರೆಸ್ ಸೇರುವ ಇರಾದೆ ಇದೆ, ಆದರೆ, ಸ್ಪಷ್ಟವಾಗಿಲ್ಲ

ಕಾಂಗ್ರೆಸ್ ಸೇರುವ ಇರಾದೆ ಇದೆ, ಆದರೆ, ಸ್ಪಷ್ಟವಾಗಿಲ್ಲ

ವಿದ್ಯಾರ್ಥಿ ಸಂಘಟನೆ ನಾಯಕಿಯಾಗಿ 90ರ ದಶಕದಲ್ಲಿ ಬೆಳೆದ ಲಂಬಾ ಅವರು 1995ರಲ್ಲಿ ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆಯಾಗಿದ್ದರು. ಕಾಂಗ್ರೆಸ್ಸಿನ ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯುಐನ ಸಕ್ರಿಯ ಸದಸ್ಯರಾಗಿದ್ದ ಲಂಬಾ ಅವರು 2002ರಲ್ಲಿ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಲಂಬಾ, ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಿಂದ 2015ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. "2013ರಿಂದ 2020 ರ ತನಕ ನನ್ನ ಪಯಣ ಆಶಾದಾಯಕವಾಗಿತ್ತು. ಎಲ್ಲಾ ಕ್ರಾಂತಿಕಾರಿ ಸಂಗಾತಿಗಳಿಗೆ ನನ್ನ ಅಭಿನಂದನೆಗಳು" ಎಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+