ವಿಚಾರಣೆ ವೇಳೆ ಜೈಲಿನಲ್ಲಿ ಕುರ್ಚಿ ಬೇಕೆಂದು ಜಡ್ಜ್ ಬಳಿ ಕೇಳಿದ ಡಿಕೆಶಿ
Recommended Video
ನವದೆಹಲಿ, ಅಕ್ಟೋಬರ್ 15: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ, ಕನಕಪುರ ಶಾಸಕ ಡಿಕೆ ಶಿವಕುಮಾರ್ ಅವರು ಇಂದು ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಜೈಲಿನಲ್ಲಿ ಕುಳಿತುಕೊಳ್ಳಲು ಕುರ್ಚಿ ಬೇಕು ಎಂದು ಕೇಳಿದ್ದಾರೆ.
"ಹಿಂದೊಮ್ಮೆ ನಾನು ಜೈಲು ಮಂತ್ರಿಯಾಗಿದ್ದೆ, ನನಗೆ ಕುಳಿತುಕೊಳ್ಳುವುದಕ್ಕೆ ಒಂದು ಕುರ್ಚಿ ಕೊಡಿ" ಎಂದು ಡಿಕೆ ಶಿವಕುಮಾರ್ ಅವರು ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು.
ಡಿಕೆಶಿ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಜಾರಿ ನಿರ್ದೇಶನಾಲಯದ (ED) ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ 10 ದಿನ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿದ್ದು, ಅ.25ರವರೆಗೂ ಡಿಕೆಶಿ ತಿಹಾರ್ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೆ. 3ರಂದು ಇ.ಡಿ. ಡಿಕೆ ಶಿವಕುಮಾರ್ ಅವರನ್ನು ಬಂಧಿಸಿತ್ತು. ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು. 14 ದಿನಗಳ ವಿಚಾರಣೆಯ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.












Click it and Unblock the Notifications