ಜಾಮೀನು ನಿರೀಕ್ಷೆಯಲ್ಲಿದ್ದ ಡಿ.ಕೆ.ಶಿವಕಮಾರ್ ಗೆ ಭಾರಿ ನಿರಾಸೆ

ನವದೆಹಲಿ, ಸೆಪ್ಟೆಂಬರ್ 19: ಜಾಮೀನಿನ ನಿರೀಕ್ಷೆಯಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ನಿರಾಸೆಯಾಗಿದೆ. ಇಂದೂ ಸಹ ಅವರಿಗೆ ಜಾಮೀನು ಸಿಗಲಿಲ್ಲ.

ಜಾರಿ ನಿರ್ದೇಶನಾಲಯ (ಇಡಿ) ಯಿಂದ ಸೆಪ್ಟೆಂಬರ್ ಮೂರರಂದು ಬಂಧನಕ್ಕೆ ಒಳಗಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಬುಧವಾರ ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಇಡಿ ಪರ ವಕೀಲರು ಬರದ ಕಾರಣ ಗುರುವಾರಕ್ಕೆ ವಿಚಾರಣೆ ಮುಂದೂಡಿತ್ತು. ಗುರುವಾರ ವಿಚಾರಣೆ ನಡೆಸಲಾಗಿ, ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ.

DK Shivakumar Bail Application Hearing Adjourned To Saturday

ನ್ಯಾಯಾಂಗ ಬಂಧನದ ಮೊದಲ ದಿನ ಆಸ್ಪತ್ರೆಯಲ್ಲಿ ಕಳೆದಿದ್ದ ಡಿ.ಕೆ.ಶಿವಕುಮಾರ್ ಎರಡನೇಯ ದಿನ ತಿಹಾರ್ ಜೈಲಿಗೆ ಸ್ಥಳಾಂತರಗೊಂಡಿದ್ದು, ನ್ಯಾಯಾಮಯದ ಆದೇಶ ತಡವಾಗಿದ್ದರಿಂದ ಶನಿವಾರದ ವರೆಗೆ ತಿಹಾರ್‌ ಜೈಲಿನಲ್ಲಿಯೇ ಕಳೆಯಬೇಕಾಗಿದೆ.

ಡಿ.ಕೆ.ಶಿವಕುಮಾರ್ ಅವರನ್ನು ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದೆ. ಸತತ 14 ದಿನಗಳವರೆಗೆ ಇಡಿ ವಶದಲ್ಲಿದ್ದ ಡಿ.ಕೆ.ಶಿವಕುಮಾರ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+