ಕೇಂದ್ರ ಸಚಿವರನ್ನು ಭೇಟಿ ಆಗಿ ಮನವಿ ನೀಡಿದ ಡಿಕೆಶಿ ಬ್ರದರ್ಸ್

ನವದೆಹಲಿ, ಜೂನ್ 17: ಕರ್ನಾಟಕ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಭಾನುವಾರದಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದರು.

ಕೃಷ್ಣಾ ಜಲ ವಿವಾದ ಬಗೆಹರಿಸಿಕೊಳ್ಳಲು, ಮೇಕೆದಾಟು ಹಾಗೂ ಮಹಾದಾಯಿ ಕುಡಿಯುವ ನೀರು ಹಾಗೂ ವಿದ್ಯುತ್ ಯೋಜನೆಗೆ ಕೇಂದ್ರದ ಅನುಮತಿ ಪಡೆಯಲು ಬೆಂಬಲ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿಕೊಳ್ಳಲಾಯಿತು. ಇಷ್ಟೇ ಅಲ್ಲದೆ ಇತರ ವಿಚಾರಗಳ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.

DK Shivakumar brothers appealed for union ministers support to get clearance of union government

ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರ ಬಳಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಮನವಿ ಮಾಡಿ, ರಾಜ್ಯದಲ್ಲಿ ಸದ್ಯಕ್ಕೆ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ವೇಗವಾಗಿ ಪುರ್ಣಗೊಳಿಸಬೇಕು. ಬೆಂಗಳೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಬೇಕು ಎಂದರು. ಹಾಗೂ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಕೂಡ ಚರ್ಚೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+