ರಾಹುಲ್ ಗಾಂಧಿ ಭೇಟಿ ಮಾಡಿದ ಡಿಕೆಎಸ್ ಸಹೋದರರು: ಏನೇನೋ ಊಹಾಪೋಹ

Recommended Video

      ರಾಹುಲ್ ಗಾಂಧಿಯನ್ನ ಭೇಟಿ ಮಾಡಿದ ಡಿ ಕೆ ಶಿವಕುಮಾರ್ ಹಾಗು ಡಿ ಕೆ ಸುರೇಶ್ | Oneindia Kannada

      ನವದೆಹಲಿ, ಜೂನ್ 19: ಕಳೆದ ಕೆಲವು ದಿನಗಳಿಂದ ನವದೆಹಲಿಯಲ್ಲಿಯೇ ಬೀಡು ಬಿಟ್ಟಿರುವ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ತಮ್ಮ ಸಹೋದರ, ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆದರು.

      ಇಂದು ರಾಹುಲ್ ಗಾಂಧಿ ಹುಟ್ಟುಹಬ್ಬ ಆಗಿದ್ದು, ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಜೊತೆಗೆ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ್ ಅವರಿಗೆ ರಾಹುಲ್ ಗಾಂಧಿ ಅಭಿನಂದನೆಗಳನ್ನು ಸಲ್ಲಿಸಿದರು.

      ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆಯೂ ಈ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಚರ್ಚೆಯ ಫಲಿತಾಂಶವಾಗಿಯೇ ಕೆಪಿಸಿಸಿ ಪದಾಧಿಕಾರಿಗಳ ವಿಸರ್ಜನೆಯ ನಿರ್ಣಯ ಹೊರಬಿದ್ದಿದೆ ಎನ್ನಲಾಗುತ್ತಿದೆ.

      DK Shivakumar, DK Suresh met AICC president Rahul Gandhi

      ಮೂಲಗಳ ಪ್ರಕಾರ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಪ್ರಸ್ತಾವ ರಾಹುಲ್ ಬಳಿಗೆ ಒಯ್ಯಲಾಗಿತ್ತು, ಅದೇ ಕಾರಣದಿಂದಲೇ ಡಿ.ಕೆ.ಶಿವಕುಮಾರ್ ಸಹ ಮೂರು ದಿನಗಳಿಂದ ನವದೆಹಲಿಯಲ್ಲಿ ಇದ್ದಾರೆ. ಆದರೆ ರಾಹುಲ್ ಗಾಂಧಿ ಸದ್ಯಕ್ಕೆ ಕೆಪಿಸಿಸಿ ಪದಾಧಿಕಾರಿಗಳನ್ನು ಮಾತ್ರವೇ ಬದಲಾಯಿಸಿದ್ದಾರೆ.

      ಡಿ.ಕೆ.ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಅವರಿಂದ ಗಟ್ಟಿ ಭರವಸೆ ದೊರೆತಿದ್ದು, ಕೆಲ ಕಾಲ ಕಾದು ನೋಡುವಂತೆ ರಾಹುಲ್ ತಿಳಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ರಾಜ್ಯ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಉಳಿಸಿಕೊಳ್ಳುವ ಜವಾಬ್ದಾರಿಯನ್ನೂ ಡಿ.ಕೆ.ಶಿವಕುಮಾರ್ ಅವರ ಹೆಗಲಿಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ.

      DK Shivakumar, DK Suresh met AICC president Rahul Gandhi

      ಸಿದ್ದರಾಮಯ್ಯ ಅವರು ಸಹ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆಗೆ ಕಾಲ ಸನ್ನಿಹಿತವಾಗಿದೆಯೆಂಬ ಅನುಮಾನ ಕಾಡುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+