• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆಶಿಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲು ಬದಲಿಗೆ ಆಸ್ಪತ್ರೆ ವಾಸ

|

ನವದೆಹಲಿ, ಸೆಪ್ಟೆಂಬರ್ 17: ಇಡಿ ವಶದಲ್ಲಿ ಸತತ 14 ದಿನಗಳನ್ನು ಕಳೆದಿರುವ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ನ್ಯಾಯಾಂಗ ಬಂಧನ ವಿಧಿಸಿತು.

ಆದರೆ ಡಿ.ಕೆ.ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸುವ ಬದಲಿಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ನ್ಯಾಯಾಧೀಶರು ಸೂಚಿಸಿದರು. ಆಸ್ಪತ್ರೆಯಲ್ಲಿಯೇ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಡಿಕೆಶಿ ಹಾಗೂ ಆಪ್ತರಿಗೆ ಇಡಿ ಕೇಸಲ್ಲಿ ಕೋರ್ಟಿನಿಂದ ಸಿಹಿ ಕಹಿ ಸುದ್ದಿ

ಡಿ.ಕೆ.ಶಿವಕುಮಾರ್ ಅವರ ಪರವಾಗಿ ಸಲ್ಲಿಸಲಾಗಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ನಡೆಸಲಾಗುತ್ತಿದ್ದು, ನಾಳಿನ ವಿಚಾರಣೆ ನಂತರ ಬರುವ ಆದೇಶದ ಮೇಲೆ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆ ಅವಲಂಬಿತವಾಗಿದೆ.

ಡಿ.ಕೆ.ಶಿವಕುಮಾರ್ ಅವರನ್ನು ಆರ್‌.ಎಂ.ಎಲ್ (ರಾಮಮನೋಹರ ಲೋಹಿಯಾ) ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುವುದು. ಒಂದು ದಿನ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಯಲ್ಲಿಯೇ ಕಳೆಯಲಿದ್ದಾರೆ.

English summary
Special court given DK Shivkumar to judicial custody. Court said DK Shivakumar should go to the Hospital, his JD will continue in the hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X