ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ.ಶಿವಕುಮಾರ್ ಗೆ ಜಾಮೀನು ಸಿಕ್ಕರೂ ಕಂಟಕ ಇನ್ನೂ ಮುಗಿದಿಲ್ಲ

|
Google Oneindia Kannada News

ನವದೆಹಲಿ, ಅಕ್ಟೋಬರ್ 23: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಅವರು ಸೆಪ್ಟೆಂಬರ್ 3 ರಂದು ಇಡಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದರು.

ಡಿ.ಕೆ.ಶಿವಕುಮಾರ್ ಗೆ ಜಾಮೀನು ಸಿಕ್ಕ ಕೂಡಲೇ ಅಭಿಮಾನಿಗಳು ಸಂಭ್ರಮಾಚರಣೆ ಪ್ರಾರಂಭಿಸಿದ್ದಾರೆ. ಡಿ.ಕೆ.ಶಿವಕುಮಾರ್‌ ಗೆ ಜಾಮೀನು ದೊರೆತಿದೆಯಾದರೂ ಕಂಟಕ ಇನ್ನೂ ಕಳೆದಿಲ್ಲ.

Live : ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ಹೈಕೋರ್ಟ್Live : ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ಹೈಕೋರ್ಟ್

ಸಿಬಿಐ ಅಧಿಕಾರಿಗಳು ಎರಡು ದಿನಗಳ ಹಿಂದೆಯಷ್ಟೆ ಡಿ.ಕೆ.ಶಿವಕುಮಾರ್‌ ಮೇಲೆ ಹೊಸ ಪ್ರಕರಣವೊಂದನ್ನು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇಡಿ ಪ್ರಕರಣದಲ್ಲಿ ಜಾಮೀನು ದೊರತರೂ ಸಹ ಸಿಬಿಐ ಪ್ರಕರಣದಲ್ಲಿ ಮತ್ತೆ ಬಂಧನಕ್ಕೆ ಒಳಗಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

DK Shivakumar Got Bail, CBI May Arrest Him

ಡಿಕೆಶಿ ಸಚಿವರಾಗಿದ್ದಾಗ ಇಂಧನ ಮಂತ್ರಿಯಾಗಿದ್ದಾಗ ಸೋಲಾರ್ ಪ್ಲಾಂಟ್‌ ಯೋಜನೆಯಲ್ಲಿ ಲಂಚ ಪಡೆದಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಅಕ್ಟೋಬರ್ 21 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಅವರ ದೆಹಲಿ ನಿವಾಸದ ಮೇಲೆ ದಾಳಿ ಸಹ ನಡೆಸಿದ್ದರು.

ಆದರೆ ಸಿಬಿಐ ಇನ್ನೂ ಎಫ್‌ಐಆರ್ ದಾಖಲು ಮಾಡಿಲ್ಲವಾದ ಕಾರಣ ಈಗಲೇ ಡಿ.ಕೆ.ಶಿವಕುಮಾರ್ ಮತ್ತೆ ಜೈಲಿಗೆ ಹೋಗುತ್ತಾರೆ ಎಂದು ಹೇಳಲಾಗದು. ಆದರೆ ಮುಂದಿನ ದಿನಗಳಲ್ಲಿ ಈ ಸಾಧ್ಯತೆಯನ್ನು ತಳ್ಳಿ ಹಾಖುವಂತಿಲ್ಲ.

ಡಿ.ಕೆ.ಶಿವಕುಮಾರ್ ಅನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದ ಇಡಿ, ದೆಹಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುವ ಸಾಧ್ಯತೆಯೂ ಇದೆ. ಜಾಮೀನು ನೀಡಿಕೆ ವಿರೋಧಿಸಿ ಇಡಿ ಸುಪ್ರೀಂ ಗೆ ಇನ್ನೆರಡು ದಿನದಲ್ಲಿ ಮನವಿ ಸಲ್ಲಿಸಲಿದೆ.

English summary
Former minister DK Shivakumar got bail Delhi high court. But CBI may arrest in future DK Shivakumar in other case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X