ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ.ಶಿವಕುಮಾರ್‌ಗೆ ಜಾಮೀನಿಲ್ಲ, ಸೆ.13 ರವರೆಗೆ ಇಡಿ ವಶಕ್ಕೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 04: ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಡಿಕೆ ಶಿವಕುಮಾರ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು. ಡಿಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13 ರ ವರೆಗೆ ಇಡಿ ವಶಕ್ಕೆ ನೀಡಲಾಗಿದೆ.

ರೋಸ್ ಅವೆನ್ಯೂನ ಇಡಿ ವಿಶೇಷ ಕೋರ್ಟ್‌ ನಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರನ್ನು ಹಾಜರುಪಡಿಸಲಾಯಿತು. ನ್ಯಾಯಾಧೀಶ ವಿಜಯ್ ಕುಮಾರ್ ಕುಹುರ್ ಅವರು ವಿಚಾರಣೆ ನಡೆಸಿ, ಆದೇಶ ನೀಡಿದರು.

619 ಕೋಟಿ ಒಡೆಯ ಡಿಕೆಶಿ; 8 ಕೋಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ಯಾಕೆ?619 ಕೋಟಿ ಒಡೆಯ ಡಿಕೆಶಿ; 8 ಕೋಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ಯಾಕೆ?

ಡಿಕೆ.ಶಿವಕುಮಾರ್ ಅವರ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ಇಡಿ ಪರ ಕೆ.ಎನ್.ನಟರಾಜ್ ವಾದ ಮಂಡಿಸಿದರು. ಮೊದಲಿಗೆ ಇಡಿಯು 14 ದಿನಗಳ ಕಾಲ ಡಿ.ಕೆ.ಶಿವಕುಮಾರ್ ಅವರನ್ನು ವಶಕ್ಕೆ ಕೇಳಿದ್ದರು. ಆದರೆ ಇದನ್ನು ನಿರಾಕರಿಸಿದ ನ್ಯಾಯಾಧೀಶರು ಇಂದಿನಿಂದ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದರು.

DK Shivakumar handed over to ED custody till September 13

ಡಿ.ಕೆ.ಶಿವಕುಮಾರ್ ಅವರು ವಿಚಾರಣೆಗೆ ಸಹಕರಿಸುತ್ತಿಲ್ಲ, ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಪ್ರಭಾವ ಬಳಸಿ ಸರ್ಕಾರಿ ಅಧಿಕಾರಿಗಳನ್ನು ಸುಳ್ಳು ಹೇಳಿಕೆ ನೀಡಲು, ದಾಖಲೆ ತಿದ್ದುವಂತೆ ಮಾಡಿದ್ದಾರೆ ಎಂದು ಇಡಿ ಪರ ವಕೀಲರು ವಾದಿಸಿದ್ದಾರೆ.

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಇಡಿಯು ಶುಕ್ರವಾರದಿಂದ ಸತತವಾಗಿ ಡಿ.ಕೆ.ಶಿವಕುಮಾರ್ ವಿಚಾರಣೆ ನಡೆಸಿತ್ತು. ಆ ನಂತರ ನಿನ್ನೆ ರಾತ್ರಿ ಕಚೇರಿಯಲ್ಲಿಯೇ ಡಿಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು.

ಬಂಧನ ನಂತರ ಡಿಕೆ ಶಿವಕುಮಾರ್ ಮುಂದಿನ ಆಯ್ಕೆಗಳೇನು?ಬಂಧನ ನಂತರ ಡಿಕೆ ಶಿವಕುಮಾರ್ ಮುಂದಿನ ಆಯ್ಕೆಗಳೇನು?

ನಿನ್ನೆ ರಾತ್ರಿಯೇ ಡಿ.ಕೆ.ಶಿವಕುಮಾರ್ ಅವರನ್ನು ವೈದ್ಯಕೀಯ ತಪಾಸಣೆಗೆಂದು ರಾಮ್‌ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಯಿತು. ಆದರೆ ಡಿ.ಕೆ.ಶಿವಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಕಾರಣ ಅವರನ್ನು ಅಲ್ಲಿಯೇ ಉಳಿಸಿಕೊಂಡು ಇಂದು ಮಧ್ಯಾಹ್ನದ ವೇಳೆಗೆ ಅವರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬರಲಾಯಿತು.

English summary
Special ED Court gave DK Shivakumar to ED custody till September 13. His bail application was rejected by ED special court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X